Skip to content
The Believer's Library

Indian Revised Version (IRV) Kannada - 2019

2 Chronicles 1 IRVKan

Show IRVKan only
Verse × ×
1 Solomon son of David strengthened his hold on his kingdom; our Father was with him, making him very great. ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
2 Solomon spoke to all Israel—the commanders of thousands and hundreds, the judges, and every leader in Israel, the family heads. ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
3 Solomon and the whole assembly went to the high place at Gibeon, where our Father's tent of meeting stood, which Moses, our Father's servant, made in the wilderness. ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
4 But David had brought the ark of our Father up from Kiriath-jearim to the place he prepared for it, pitching a tent for it in Jerusalem. ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
5 The bronze altar Bezalel son of Uri, son of Hur, made was there before the tabernacle of our Father; so Solomon and the assembly sought our Father there. ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
6 Solomon went up to the bronze altar before our Father at the tent of meeting and offered 1,000 burnt offerings on it. ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
7 That night our Father appeared to Solomon and said to him, "Ask what I should give you." ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು
8 Solomon said to our Father, "You showed great covenant love to David my father, and made me king in his place. ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
9 Now, my Father, confirm your promise to my father David, for you made me king over a people as many as the earth's dust. ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
10 Give me wisdom and knowledge now to lead this people, for who can govern this great people of yours?" ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
11 Our Father said to Solomon, "Because this was in your heart—you asked not for riches, wealth, or honor, nor your enemies' lives, nor long life, but for wisdom and knowledge to govern my people, over whom I made you king, ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
12 wisdom and knowledge are given you. I will also give you riches, wealth, and honor no king before you had, and none after you will." ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
13 So Solomon went from Gibeon's high place, from before the tent of meeting, to Jerusalem, and reigned over Israel. ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
14 Solomon gathered chariots and horsemen; he had 1,400 chariots and 12,000 horsemen, which he stationed in the chariot cities and with the king in Jerusalem. ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
15 In Jerusalem the king made silver and gold like stones, and cedar as plentiful as foothill sycamore-figs. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
16 Solomon's horses came from Egypt and Kue; the king's traders bought them from Kue at market price. ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
17 They imported a chariot from Egypt for about fifteen pounds of silver, a horse for about four; through them they exported these to all the kings of the Hittites and Aram. ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]