Skip to content
The Believer's Library

Indian Revised Version (IRV) Kannada - 2019

2 Chronicles 32 IRVKan

Show IRVKan only
Verse × ×
1 After these things and these acts of faithfulness, Sennacherib, Assyria's king, invaded Judah, besieged its fortified cities, meaning to break into them for himself. ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
2 When Hezekiah saw that Sennacherib had come, intent on making war against Jerusalem, ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
3 he consulted his officials and warriors about blocking the springs outside the city, and they helped him. ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
4 Many people gathered and blocked all the springs and the stream flowing through the land, asking, "Why should Assyria's kings come and find abundant water?" ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
5 He worked hard to rebuild all the broken sections of the wall, raised towers on it, built another wall outside, strengthened the Millo of the city of David, and made abundant weapons and shields. ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
6 He set war commanders over the people, gathered them at the city gate square, and encouraged them: ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
7 "Be strong and brave. Don't fear or dread Assyria's king and all his horde, for more are with us than with him. “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
8 With him is only an arm of flesh; with us is our Father, to help us and fight our battles." The people relied on Hezekiah king of Judah's words. ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
9 After this, while besieging Lachish with all his forces, Sennacherib king of Assyria sent his servants to Jerusalem, to Hezekiah king of Judah and all Judah there, saying: ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
10 "This is what Sennacherib king of Assyria says: On what are you trusting, staying under siege in Jerusalem? “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
11 Isn't Hezekiah deceiving you, surrendering you to die by famine and thirst, when he says, 'The LORD our God will save us from the hand of the king of Assyria'? ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
12 Wasn't it Hezekiah who removed his high places and altars, telling Judah and Jerusalem to worship at one altar and burn offerings there? ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
13 Don't you know what I and my fathers did to all peoples of other lands? Could their nations' gods rescue their lands from my hand? ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
14 What god of nations my fathers devoted to destruction could save his people from my hand? How then can your God save you from my hand? ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
15 Don't let Hezekiah deceive or mislead you like this, and don't believe him: no god of any nation or kingdom could rescue his people from my hand or my fathers'—much less will your God rescue you from my hand!" ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
16 And his servants spoke still more against our Father and against his servant Hezekiah. ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
17 Sennacherib also wrote letters insulting our Father, the God of Israel, speaking against him: "The nations' gods did not rescue their people from my hand; neither will Hezekiah's God rescue his people from my hand." ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
18 They shouted loudly in Judah's language to Jerusalem's people on the wall, to frighten and terrify them, to seize the city. ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
19 They spoke of Jerusalem's God like the gods of earth's peoples, the work of human hands. ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
20 Then King Hezekiah and the prophet Isaiah son of Amoz prayed about this, crying out to heaven. ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
21 So our Father sent an angel who killed every mighty warrior, commander, and officer in the Assyrian king's camp. Sennacherib returned home in disgrace, and when he entered his god's temple, some of his own sons killed him there with the sword. ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
22 So our Father saved Hezekiah and Jerusalem's people from the hand of Sennacherib king of Assyria and all others, and he cared for them on every side. ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
23 Many brought gifts to our Father in Jerusalem, and treasures to Hezekiah king of Judah; afterward all nations honored Hezekiah highly. ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
24 In those days Hezekiah grew sick to death; he prayed to our Father, who answered, giving him a sign. ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
25 But Hezekiah didn't repay the good done him; his heart grew proud, so anger came on him and on Judah and Jerusalem. ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
26 Hezekiah humbled himself for his proud heart, he and Jerusalem's people, so our Father's wrath didn't reach them in Hezekiah's days. ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
27 Hezekiah had great wealth and honor. He built storerooms for silver, gold, gems, spices, shields, and other valuables, ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
28 storerooms for the harvest of grain, new wine, and oil; stalls for all kinds of livestock; pens for flocks. ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
29 He built cities for himself and gained huge flocks and herds, for our Father gave him very great wealth. ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
30 Hezekiah stopped Gihon's upper outlet and directed the water down the west side of David's city. He succeeded in all he did. ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
31 When Babylon's rulers sent envoys to him asking about the land's sign, our Father left him to himself, to test him and to know all in his heart. ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
32 Hezekiah's remaining acts and faithful deeds are written in the vision of Isaiah the prophet, son of Amoz, in the Book of the Kings of Judah and Israel. ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
33 Hezekiah slept with his ancestors, buried in the upper tombs of David's sons. All Judah and Jerusalem's residents honored him at death. His son Manasseh succeeded him. ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]