Skip to content
The Believer's Library

Indian Revised Version (IRV) Kannada - 2019

2 Chronicles 5 IRVKan

Show IRVKan only
Verse × ×
1 Solomon completed all the work for the house of our Father. He then brought in his father David's dedicated things—silver, gold, all the vessels—and put them in the storerooms of the house of our Father. ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
2 Solomon then gathered Israel's elders, all tribal heads, and leaders of Israel's ancestral families in Jerusalem, to bring up the ark of the covenant of our Father from the City of David, also called Zion. ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.
3 So all the men of Israel gathered before the king at the feast in the seventh month. ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.
4 When all the elders of Israel had come, the Levites took up the ark. ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
5 The priests and Levites brought up the ark, the tent of meeting, and all the holy vessels in it. ಯಾಜಕರಾದ ಲೇವಿಯರು ಒಡಂಬಡಿಕೆಯ ಮಂಜೂಷವನ್ನು, ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳನ್ನೂ ಹೊತ್ತುಕೊಂಡು ತಂದರು.
6 King Solomon and all Israel's assembly who had gathered before him stood before the ark, sacrificing sheep and cattle too many to count or number. ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
7 The priests brought our Father's covenant ark to its place, the house's inner sanctuary, the Most Holy Place, beneath the cherubim's wings. ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.
8 For the cherubim spread their wings over the ark's place, covering it and its poles from above. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
9 The poles were long enough that their ends showed from the ark before the inner sanctuary, but not outside; they remain there to this day. ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.
10 The ark held nothing but the two tablets Moses placed there at Horeb, where our Father made a covenant with the Israelites when they left Egypt. ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.
11 Then the priests left the holy place. (All priests present had made themselves holy, regardless of their divisions, ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.
12 and all the Levite singers—Asaph, Heman, Jeduthun, their sons and relatives—stood east of the altar in fine linen, playing cymbals, harps, and lyres, with 120 priests blowing trumpets.). ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.
13 The trumpeters and singers, united, praised and thanked our Father with one voice—raising their voices with the trumpets, cymbals, and instruments, they praised him: "He is good; his covenant love endures forever." Then a cloud filled our Father's house, ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
14 so the priests couldn't stand to serve because of the cloud, for the glory of our Father filled the house of our Father. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]