Skip to content
The Believer's Library

Indian Revised Version (IRV) Kannada - 2019

2 John 1 IRVKan

Show IRVKan only
Verse × ×
1 The elder, to the chosen lady and her children, whom I love in truth—not only I, but all who know the truth, ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
2 because of the truth that lives in us and will be with us forever. ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
3 Grace, mercy, and peace will be with us from our Father and from Jesus Christ, our Father's Son, in truth and love. ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
4 I was overjoyed to find some of your children walking in truth, as our Father commanded us. ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.
5 Now I ask you, dear lady: not a new command, but one we've had from the start—love one another. ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
6 This is love: that we walk by his commands. This is the command, as you heard from the beginning: that you walk in love. ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
7 For many deceivers have gone out into the world, denying that Jesus Christ came in the flesh. This is the deceiver and the antichrist. ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
8 Watch yourselves, so that you don't lose what we have worked for, but receive a full reward. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
9 Anyone who oversteps, not remaining in Christ's teaching, lacks our Father; whoever remains in the teaching has both our Father and the Son. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
10 If someone comes to you without this teaching, don't welcome them into your home or greet them, ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
11 for whoever greets him shares in his evil deeds. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
12 I have much to write, but I'd rather not use paper and ink. I hope to come and speak with you face to face, so our joy may be complete. ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
13 The children of your chosen sister greet you. ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]