Skip to content
The Believer's Library

Indian Revised Version (IRV) Kannada - 2019

2 Peter 2 IRVKan

Show IRVKan only
Verse × ×
1 False prophets arose among the people, just as false teachers will arise among you. They will secretly bring in destructive heresies, even deny the Master who bought them, and bring swift destruction on themselves. ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 Many will follow their lust, and because of them the way of truth will be slandered. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3 In their greed they'll exploit you with made-up words. Their judgment, decreed long ago, isn't idle; their ruin isn't asleep. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
4 For if our Father did not spare angels who sinned, but threw them into the deepest pit of gloom, chained in darkness, kept for judgment; ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
5 if he didn't spare the ancient world, but protected Noah, an announcer of righteousness, with seven others, when he brought a flood on the wicked world; ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
6 and if he condemned Sodom and Gomorrah, reducing their cities to ashes, as an example of what awaits the wicked; ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 and if he rescued righteous Lot, worn out by the shameless behavior of lawless people. ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
8 That righteous man, living among them, was tormented day after day in his righteous soul by the lawless deeds he saw and heard, ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9 then our Father knows how to rescue the godly from trials, and keep the wicked under punishment until judgment day. ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
10 Especially those chasing flesh's corrupt desires and despising authority—bold, arrogant, unafraid to slander celestial beings. ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
11 Whereas angels, greater in strength and power, don't bring a slanderous judgment against them before our Father. ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
12 But these people, like unreasoning animals born by instinct to be caught and destroyed, insult what they don't understand, and will be destroyed in their destruction, ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13 suffering wrong as pay for wrongdoing. They count it a pleasure to revel in broad daylight. They are stains and flaws, reveling in their deceptions while feasting with you. ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14 Their eyes are full of adultery, never stopping from sin, luring unstable souls, hearts trained in greed—cursed children! ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
15 Abandoning the straight path, they went astray, following the way of Balaam son of Beor, who loved the wages of wrongdoing. ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16 But he was corrected for his own wrongdoing: a mute donkey spoke with a human voice and stopped the prophet's madness. ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
17 These are dry springs, storm-driven mists—thick darkness is kept for them. ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
18 With inflated, empty words they lure through the sensual desires of the flesh those barely escaping from people living in error. ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19 They promise them freedom, while themselves enslaved to corruption—for whatever overcomes a person enslaves them. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
20 For if, having escaped the world's corruption through knowing our Lord and Savior Jesus Christ, they are entangled in it again and overcome, their end is worse than their start. ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21 It would have been better for them never to know the way of righteousness than to know it and turn back from the holy commandment given to them. ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
22 The true proverb has happened to them: "A dog returns to its vomit," and "A washed sow returns to wallow in mud." “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]