Skip to content
The Believer's Library

Indian Revised Version (IRV) Kannada - 2019

2 Peter 3 IRVKan

Show IRVKan only
Verse × ×
1 Beloved, this is now the second letter I write you; in both I stir up your sincere mind by reminder. ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
2 Remember the words the holy prophets spoke beforehand, and the command of our Lord and Savior given through your apostles. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
3 Know this first: mockers will come in the last days, mocking, following their own lusts. ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
4 They will ask, "Where is his promised coming? Since the fathers fell asleep, everything continues as it has since creation's beginning." “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
5 They willfully ignore this: long ago, by our Father's word, heavens existed, and earth formed out of water and through water, ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
6 and through these the world of that time was deluged with water and perished. ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
7 By the same word, today's heavens and earth are stored up for fire, kept for the day of judgment and destruction of the wicked. ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
8 Don't overlook this, loved ones: with our Father, one day is like 1,000 years, and 1,000 years like one day. ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
9 Our Father isn't slow to keep his promise, as some think; he's patient with you, wanting no one to perish, but all to reach repentance. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
10 But the day of our Lord Jesus will come like a thief: the heavens will vanish with a rushing sound, the elements will burn and melt, and the earth with all its works will be exposed. ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
11 Since all this will dissolve, what sort of people should you be? You should live holy lives, devoted to God, ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
12 as you wait for and hasten the coming of our Father's day, when the heavens will be set ablaze and dissolved, and the elements melt in the heat. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
13 But as he promised, we wait for new heavens and a new earth, where righteousness lives. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
14 So, beloved, awaiting these things, strive to be found by him in peace, spotless and without defect. ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
15 Regard our Lord's patience as salvation, just as our beloved brother Paul wrote you, with the wisdom given him, ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
16 as in all his letters, where he speaks about these things. Some parts are hard to understand, and the ignorant and unstable twist them—as they do the other Scriptures—to their own destruction. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
17 So then, loved ones, knowing this in advance, guard yourselves, so you aren't swept away by the error of lawless people and lose your own firm standing. ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
18 Grow in the grace and knowledge of our Lord and Savior Jesus Christ. To him be glory, now and to the day of eternity. Amen. ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]