Skip to content
The Believer's Library

Indian Revised Version (IRV) Kannada - 2019

Acts 1 IRVKan

Show IRVKan only
Verse × ×
1 In my first book, Theophilus, I wrote about everything Jesus began to do and teach, ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
2 until the day he was taken up, having given commands through the Holy Spirit to the apostles he had chosen. ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
3 After his suffering, he showed himself alive to them through many proofs, appearing to them forty days, speaking of our Father's kingdom. ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
4 While staying with them, he ordered them not to leave Jerusalem but to wait for my Father's promise—"which," he said, "you heard from me; ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
5 for John baptized with water, but within a few days you will be baptized with the Holy Spirit." ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
6 So, gathered together, they asked, "Lord, will you restore the kingdom to Israel now?" ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
7 He said to them, "You're not to know times or seasons that my Father has set by his own authority. ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
8 But when the Holy Spirit falls on you, you'll gain power to be my witnesses—in Jerusalem, all Judea, Samaria, and earth's farthest reaches." ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
9 After he said these things, as they watched, he was lifted up, and a cloud took him from their sight. ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
10 As they stared into heaven while he went, suddenly two men in white clothes stood beside them. ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
11 They said, "Galileans, why stare at the sky? This Jesus, taken from you into heaven, will return exactly as you saw him go." “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
12 Then they returned to Jerusalem from the Mount called Olivet, near Jerusalem, about a half-mile away. ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13 Entering, they went up to the upstairs room where they stayed: Peter, John, James, Andrew, Philip, Thomas, Bartholomew, Matthew, James son of Alphaeus, Simon the Zealot, and Judas son of James. ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14 All these persisted together in prayer, with the women, Mary the mother of Jesus, and his brothers. ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15 In those days Peter stood up among the brothers (about 120 in all) and said, ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16 "Brothers, the Scripture the Holy Spirit spoke beforehand through the mouth of David about Judas—who became guide to those who arrested Jesus—had to be fulfilled. “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17 For he was numbered among us and was allotted his share in this ministry." ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18 (This man bought a field with the pay for his wrongdoing, then fell headfirst, burst open in the middle, and all his insides spilled out. (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19 This became known to everyone living in Jerusalem, so the field was named in their language Akeldama, that is, Field of Blood.). ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20 "For it's written in the Book of Psalms: 'Let his camp become empty, with no one living there,' and 'Let another take his position.' ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21 So one of the men who accompanied us all along, while the Lord Jesus went in and out among us, ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
22 from John's baptism until the day he was taken up from us—one of these must become with us a witness to his resurrection." Not in this edition
23 And they put forward two—Joseph called Barsabbas, who was also called Justus, and Matthias. ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24 They prayed and said, "You, Lord Jesus, who know all hearts, show which one of these two you chose, “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
25 to take the place in this ministry and apostleship that Judas left to go to his own place. Not in this edition
26 They cast lots for them; the lot fell to Matthias, and he was counted with the eleven apostles." ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]