Skip to content
The Believer's Library

Indian Revised Version (IRV) Kannada - 2019

Acts 2 IRVKan

Show IRVKan only
Verse × ×
1 When the day of Pentecost arrived, they were all together in one place. ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
2 Suddenly a sound like a violent, rushing wind came from heaven and filled the entire house where they sat. ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 What looked like divided tongues of fire appeared and rested on each one of them. ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
4 All were filled with the Holy Spirit and began speaking in other tongues, as the Spirit gave them words to say. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
5 At that time devout Jews from every nation under heaven were living in Jerusalem. ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
6 When this sound rang out, a crowd gathered, confused, since each one heard them speak in his own language. ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
7 They were amazed and astonished, saying, "Are not all these who are speaking Galileans? ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
8 How is it, then, that each of us hears them in our own native language? ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
9 Parthians, Medes, and Elamites; those who live in Mesopotamia, Judea and Cappadocia, Pontus and Asia, ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10 Phrygia, Pamphylia, Egypt, the parts of Libya near Cyrene; visitors from Rome, Jews and converts to Judaism; ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
11 Cretans and Arabs—we hear them telling in our own tongues the mighty works of our Father!" ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12 They were all amazed and perplexed, saying to one another, "What does this mean?" ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13 But others mocked and said, "They are full of sweet wine." ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 But Peter stood with the eleven, raised his voice, and declared to them: "Men of Judea, everyone living in Jerusalem—know this and listen carefully to my words. ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 These people are not drunk, as you suppose, for it is only nine o'clock in the morning. ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 No, this is what was spoken through the prophet Joel: ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 'And in the last days, says our Father, I will pour out my Spirit on all people; your sons and your daughters will prophesy, your young men will see visions, and your old men will dream dreams. “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18 Even on my male servants and my female servants in those days I will pour out my Spirit, and they will prophesy. ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19 I will show wonders in the heavens above and signs on the earth below—blood and fire and billows of smoke. ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
20 The sun will be turned to darkness and the moon to blood, before the great and glorious day of the Lord comes. Not in this edition
21 And everyone who calls on the name of the Lord will be saved.'" ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22 "Men of Israel, hear these words: Jesus of Nazareth—a man our Father attested to you through miracles, wonders, and signs our Father did through him among you, as you yourselves know. “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23 This man, handed over by our Father's set plan and foreknowledge, you crucified and killed by the hands of lawless men. ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24 But our Father raised him, freeing him from death's agony, since death could not hold him. ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25 For David says of him: 'I saw our Father always before me, for he's at my right hand, so I won't be shaken.' ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26 Therefore my heart was glad and my tongue rejoiced; moreover, my body also will rest in hope. ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27 For you will not abandon my soul to the grave, nor let your Holy One see decay. ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
28 You have shown me the paths of life; you will fill me with gladness in your presence." ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
29 "Brothers, I can tell you plainly: our ancestor David died, was buried, and his tomb remains with us to this day. “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
30 Since he was a prophet, he knew our Father had sworn an oath to seat one of his descendants on his throne, ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
31 he foresaw and spoke of the Christ's resurrection, that he was not abandoned to the grave, nor his body saw decay. ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
32 This Jesus our Father raised up, and we are all witnesses of it. ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33 So, lifted up to our Father's right hand, having received the promised Holy Spirit from the Father, he poured out what you now see and hear. ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34 For David never went up into heaven, but he himself says: "Our Father said to my Lord, 'Sit at my right hand, ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
35 until I make your enemies a footstool for your feet.'" Not in this edition
36 "So let the whole house of Israel know for certain: our Father made this Jesus, whom you crucified, both Lord and Christ." “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
37 Cut to the heart at this, they asked Peter and the other apostles, "Brothers, what should we do?" ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
38 Peter said to them, "Repent, and each of you be baptized in the name of Jesus Christ for the forgiveness of your sins, and you will receive the gift of the Holy Spirit. ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
39 For the promise is for you, your children, and all far off—as many as the Sovereign our Father will call to himself." ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
40 And with many other words he warned and urged them, saying, "Save yourselves from this corrupt generation." ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
41 So those who welcomed his message were baptized, and about 3,000 people were added that day. ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
42 They devoted themselves to the apostles' teaching and deep communion, to the breaking of bread and the prayers. ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
43 Awe came over everyone, and many wonders and signs were done through the apostles. ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
44 All who believed were together and had all things in common. ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
45 They sold their property and possessions and distributed the proceeds to all, as anyone needed. ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
46 Every day, devoting themselves together in the temple, breaking bread house to house, they shared food with joyful, sincere hearts, ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
47 praising our Father, with favor among all the people. The Lord added to their number daily those being saved. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]