Skip to content
The Believer's Library

Indian Revised Version (IRV) Kannada - 2019

Acts 3 IRVKan

Show IRVKan only
Verse × ×
1 Peter and John were going up to the temple at around three in the afternoon, the hour of prayer. ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
2 A man lame from birth was carried and placed daily at the temple gate called Beautiful, to beg from those entering the temple. ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
3 Seeing Peter and John about to go into the temple, he asked them for money. ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.
4 And Peter, gazing at him with John, said, "Look at us." ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.
5 And he fixed his attention on them, expecting to receive something from them. ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
6 Peter said, "I own no silver or gold, but I give you what I have: in the name of Jesus Christ of Nazareth, rise and walk." ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
7 Taking his right hand, he raised him up; instantly his feet and ankles grew strong. ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
8 Jumping up, he stood, began walking, and entered the temple with them, walking, jumping, and praising our Father. ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
9 And all the people saw him walking and praising our Father. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
10 They recognized him as the beggar who sat at the temple's Beautiful Gate, and were filled with wonder and amazement at what had happened to him. ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
11 As he held on to Peter and John, all the people ran to them at the portico called Solomon's, utterly astonished. ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
12 Seeing this, Peter said to the people, "Israelites, why does this amaze you? Why stare at us, as if by our own power or godliness we made him walk? ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
13 The God of Abraham, Isaac, and Jacob, the God of our fathers, glorified his servant Jesus, whom you handed over and denied before Pilate, when Pilate decided to release him. ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
14 But you denied the Holy and Righteous One, asking that a murderer be given to you. ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
15 You killed the Author of life; our Father raised him from the dead. To this we are witnesses. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
16 His name, through faith in his name, has made this man strong—the very man you see and know. And faith in Jesus has given him this complete health right before your eyes. ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
17 "And now, brothers, I know that you acted in ignorance, as did also your rulers. “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
18 But our Father fulfilled what he predicted through all the prophets: his Christ would suffer. ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
19 Repent, then, and turn back, so your sins are wiped out, ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
20 that times of refreshing may come from our Father's presence, and that he may send the Christ appointed for you, Jesus, ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
21 whom heaven must receive until all things are restored, about which our Father spoke through his holy prophets long ago. ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
22 Moses said, 'Your Father will raise up a prophet like me for you, from your brothers. Listen to him in everything he tells you.' ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
23 Anyone who does not listen to that prophet will be utterly destroyed from among the people.' ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.
24 All the prophets who spoke, from Samuel onward, also announced these days. ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
25 You are the sons of the prophets and of the covenant our Father made with your fathers, telling Abraham, 'By your offspring all the families of the earth will be blessed.' ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
26 Our Father raised up his servant and sent him to you first, to bless you by turning each of you from your evil." ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]