Skip to content
The Believer's Library

Indian Revised Version (IRV) Kannada - 2019

Daniel 1 IRVKan

Show IRVKan only
Verse × ×
1 In Jehoiakim king of Judah's third year, Nebuchadnezzar king of Babylon marched on Jerusalem and besieged it. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
2 The Sovereign Father handed Jehoiakim king of Judah over to him, with some items from our Father's house; he took them to Shinar, to his god's house, and the items into his god's treasury. ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
3 The king ordered Ashpenaz, his chief official, to bring some Israelites from the royal family and nobility. ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
4 Young men without defect, good-looking, skilled in all wisdom, well-informed, quick to understand, fit to stand in the king's palace—and to teach them Babylonian writing and language. ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
5 The king assigned them a daily portion of his food and wine, three years' training, then service before him. ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
6 Among them were Daniel, Hananiah, Mishael, and Azariah, from the sons of Judah. ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
7 The chief official renamed them: Daniel, Belteshazzar; Hananiah, Shadrach; Mishael, Meshach; Azariah, Abednego. ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
8 Daniel resolved not to make himself unclean with the king's food or wine, so he asked the chief official's permission not to make himself unclean. ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
9 Now our Father gave Daniel favor and compassion in the eyes of the chief official. ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
10 The chief official told Daniel, "I fear my lord the king, who set your food and drink. Why should he see your faces worse than boys your age? You'd forfeit my head to the king." ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
11 Then Daniel said to the steward the chief official had appointed over Daniel, Hananiah, Mishael, and Azariah, ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
12 "Please test your servants for ten days. Give us only vegetables to eat and water to drink. ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
13 Then compare our appearance with the youths eating the king's food; do with your servants as you see." ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
14 So he agreed to this and tested them for ten days. ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
15 After ten days they looked healthier and better fed than all the young men eating the royal food. ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
16 So the steward took away their assigned food and the wine they were to drink, and gave them vegetables instead. ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
17 To these four boys our Father gave knowledge and insight in all writing and wisdom; Daniel understood all visions and dreams. ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
18 When the king's set days for bringing them in ended, the chief official brought them before Nebuchadnezzar. ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
19 The king spoke with them, and none matched Daniel, Hananiah, Mishael, and Azariah; so they served the king. ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
20 Whenever the king questioned them on wisdom and understanding, he found them ten times better than all magicians and enchanters in his whole kingdom. ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
21 And Daniel remained there until the first year of King Cyrus. ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]