Skip to content
The Believer's Library

Indian Revised Version (IRV) Kannada - 2019

Daniel 3 IRVKan

Show IRVKan only
Verse × ×
1 King Nebuchadnezzar made a gold statue, about ninety feet tall and nine feet wide, and set it up on the Dura plain in Babylon province. ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 King Nebuchadnezzar sent for the satraps, prefects, governors, counselors, treasurers, judges, magistrates, and all provincial officials to come to the dedication of the image he had set up. ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
3 Then satraps, prefects, governors, counselors, treasurers, judges, magistrates, and all provincial officials gathered to dedicate the statue King Nebuchadnezzar set up, and stood before the statue Nebuchadnezzar set up. ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
4 Then the herald proclaimed loudly, "Peoples, nations, and languages—you are commanded: ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
5 When you hear the horn, flute, lyre, harp, zither, bagpipe, and all music, fall down and worship the gold image King Nebuchadnezzar set up. ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
6 Anyone who doesn't fall down and worship will immediately be thrown into a blazing fiery furnace." ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
7 As soon as all peoples heard the horn, flute, lyre, harp, zither, and every kind of music, all peoples, nations, and languages fell down and worshiped the golden image King Nebuchadnezzar had set up. ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
8 At that time certain astrologers came forward and maliciously accused the Jews. ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
9 They said to King Nebuchadnezzar, "King, may you live forever! ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
10 You, king, decreed: whoever hears the horn, flute, lyre, harp, zither, bagpipe, and any music must fall down and worship the gold image, ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
11 and whoever does not fall down and worship will be thrown into a blazing fiery furnace. “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
12 Some Jews you put in charge of Babylon province—Shadrach, Meshach, and Abednego—disregard you, king. They won't serve your gods or worship the gold statue you set up." ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
13 Furious, Nebuchadnezzar ordered Shadrach, Meshach, and Abednego brought; they were brought before the king. ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
14 Nebuchadnezzar said, "Shadrach, Meshach, Abednego, is it true you don't serve my gods or worship the gold statue I set up? ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
15 Now if you're ready—when horn, flute, lyre, harp, zither, bagpipe, and every kind of music sound, fall down and worship the image I made—good. But if you don't worship, you'll be thrown at once into a blazing fiery furnace. What god can rescue you from my hands?" “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
16 Shadrach, Meshach, and Abednego answered the king, "Nebuchadnezzar, we don't need to answer you about this. ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
17 If our Father, whom we serve, can rescue us, he will rescue us from the blazing furnace and from your hand, king. ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
18 But if not, know this, king: we won't serve your gods or worship the gold statue you set up." ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
19 Then Nebuchadnezzar, furious, his expression changed toward Shadrach, Meshach, and Abednego; he ordered the furnace heated seven times hotter than normal. ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
20 He ordered some of his strongest soldiers to bind Shadrach, Meshach, and Abednego and throw them into the blazing furnace. ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
21 So these men, tied up in cloaks, trousers, turbans, and other garments, were thrown into the blazing fiery furnace. ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
22 Because of the king's harsh order and furnace's extreme heat, the fire's flame killed the men who lifted up Shadrach, Meshach, and Abednego. ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
23 These three men—Shadrach, Meshach, and Abednego—fell bound into the blazing furnace. ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
24 Then King Nebuchadnezzar, astonished, rose in haste. He asked his advisers, "Didn't we throw three bound men into the fire?" They answered the king, "True, king." ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
25 He said, "Look—I see four men, unbound, walking in the middle of the fire, unharmed; the fourth looks like a son of the gods." ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
26 Nebuchadnezzar went to the blazing furnace's door and said, "Shadrach, Meshach, and Abednego, servants of the Most High God, come out here!" Shadrach, Meshach, and Abednego came out of the fire. ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
27 The satraps, prefects, governors, and king's counselors gathered and saw fire had no power over these men's bodies—hair not singed, robes unharmed, no smell of fire on them. ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
28 Nebuchadnezzar said, "Blessed be the God of Shadrach, Meshach, and Abednego! He sent his angel and rescued his trusting servants. They defied the king's command and were willing to die rather than serve or worship any god but their own God. ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
29 I decree: any people, nation, or language that speaks anything against the God of Shadrach, Meshach, and Abednego will be cut to pieces, their houses turned to rubble—since no other god can rescue like this." ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
30 Then the king promoted Shadrach, Meshach, and Abednego in the province of Babylon. ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]