Skip to content
The Believer's Library

Indian Revised Version (IRV) Kannada - 2019

Daniel 4 IRVKan

Show IRVKan only
Verse × ×
1 King Nebuchadnezzar, to all peoples, nations, and languages living throughout the earth: May your peace be multiplied. ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
2 I am glad to declare the signs and wonders the Most High God has done for me. ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
3 How great are his signs, and how mighty are his wonders! His kingdom is an everlasting kingdom, and his dominion is from generation to generation. ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
4 I, Nebuchadnezzar, was at ease in my house and flourishing in my palace. “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.
5 I saw a dream that frightened me; thoughts on my bed and visions in my head terrified me. ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
6 So I ordered all Babylon's wise men brought before me to tell me the dream's meaning. ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
7 Then the magicians, enchanters, Babylonians, and astrologers entered. I told them the dream, but they could not interpret it for me. “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
8 Finally Daniel came before me—named Belteshazzar after my god's name, the holy gods' spirit in him—and I told him the dream. ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
9 Belteshazzar, chief magician, I know the spirit of the holy gods is in you, and no mystery baffles you—tell me the visions of my dream that I saw, and their meaning. ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
10 The visions in my mind while in bed: I saw a tree in the middle of the earth, very tall. ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
11 The tree grew and became strong, and its top reached to heaven, and it was visible to the ends of the whole earth. ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
12 Its leaves were beautiful and its fruit abundant, and in it was food for all. Wild animals found shade under it, and the birds of the heavens lived in its branches, and all flesh was fed from it. ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
13 In my visions in bed I saw a watcher, a holy one, coming down from heaven. ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
14 He shouted: Cut down the tree, chop its branches, strip its leaves, scatter its fruit. Let animals flee from under it, birds from its branches. ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
15 But leave the stump of its roots in the earth, bound with a band of iron and bronze, in the grass of the field. Let him be drenched with the dew of heaven, and let his portion be with the wild animals in the grass of the earth. ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.
16 Let his human mind be taken away and a beast's mind be given to him, and let seven periods of time pass over him. ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
17 The sentence is by the decree of the watchers, the decision by the word of the holy ones, so that the living may know that the Most High rules over the kingdom of men and gives it to whom he will and sets over it the lowliest of men.' ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
18 This is the dream I, King Nebuchadnezzar, saw. Tell me its meaning, Belteshazzar, for my kingdom's wise men can't explain it, but you can—the spirit of the holy gods is in you. ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
19 Then Daniel, called Belteshazzar, was stunned briefly, alarmed by his thoughts. The king said, "Belteshazzar, don't let the dream or its meaning alarm you." Belteshazzar answered, "My lord, may the dream be for your haters, its meaning for your enemies!" ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
20 The tree you saw grew strong, its top reaching heaven, visible to all the earth, “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
21 beautiful leaves, abundant fruit, food for all—wild animals lived beneath it, birds of the sky nested in its branches. ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,
22 It is you, king—you have grown and become strong; your greatness has grown, reaching heaven, your dominion to the ends of the earth. ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
23 Because the king saw a watcher, a holy one, come down from heaven, saying: Cut down the tree, destroy it—but leave the stump of its roots in the ground, bound with a band of iron and bronze in the field's grass. Let him be drenched with the dew of heaven; his portion with the wild animals, until seven periods of time pass over him. “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
24 This is the interpretation, my king: the Most High's decree has come upon my lord the king, “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.
25 you'll be driven from people to live among wild animals, eating grass like oxen, drenched with the dew of heaven, until seven times pass over you and you know the Most High rules the human kingdom, giving it to whoever he chooses. ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
26 The command to leave the stump and its roots in the ground: your kingdom will be restored to you once you know Heaven rules. ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
27 So, king, accept my advice: break from your sins through righteousness, your wrongdoing through mercy to the poor, so your prosperity may continue. ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
28 All this came upon King Nebuchadnezzar. ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.
29 Twelve months later, he was walking on the roof of Babylon's royal palace. ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,
30 The king said, "Is this not great Babylon I built as a royal house by my mighty power, for the glory of my majesty?" “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
31 The words were still in the king's mouth when a voice fell from heaven: "King Nebuchadnezzar, this is said to you: the kingdom has left you. ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
32 You'll be driven from people, living with wild animals, eating grass like an ox. Seven periods will pass over you, until you know the Most High rules mankind's kingdom and gives it to whomever he wills." ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
33 At once the word came true against Nebuchadnezzar: driven from people, he ate grass like cattle, his body soaked by the dew of heaven, until his hair grew like eagle feathers, his nails like bird claws. ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
34 When the days ended, I, Nebuchadnezzar, raised my eyes to heaven, and my reason returned. I blessed the Most High, praised and honored the One who lives forever, whose rule is everlasting, whose kingdom spans every generation. ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
35 All the inhabitants of the earth are counted as nothing, and he does according to his will among the host of heaven and among the inhabitants of the earth; and no one can hold back his hand or say to him, "What have you done?" ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
36 Then my sanity returned; my majesty and splendor returned for my kingdom's glory. My advisers and nobles sought me; I was restored over my kingdom, and surpassing greatness was added to me. ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
37 Now I, Nebuchadnezzar, praise, exalt, and honor Heaven's King, for all his works are right, his ways just; those walking in pride he can humble. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]