Skip to content
The Believer's Library

Indian Revised Version (IRV) Kannada - 2019

Daniel 5 IRVKan

Show IRVKan only
Verse × ×
1 King Belshazzar held a great feast for 1,000 nobles, drinking wine in the presence of the 1,000. ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
2 While tasting the wine, Belshazzar ordered in the gold and silver vessels his father Nebuchadnezzar took from Jerusalem's temple, for the king, his nobles, wives, and concubines to drink from. ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
3 Then they brought the gold vessels taken from the temple, our Father's house in Jerusalem; the king, his nobles, wives, and concubines drank from them. ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 They drank the wine and praised the gods of gold, silver, bronze, iron, wood, and stone. ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
5 Just then a human hand's fingers appeared and wrote on the plaster of the king's palace wall opposite the lampstand, and the king watched the hand writing. ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
6 The king's face changed color, his thoughts terrified him, his hips gave way, and his knees knocked. ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 The king shouted for the enchanters, astrologers, and fortune-tellers, telling Babylon's wise men, "Whoever reads this writing and tells me what it means will wear purple, a gold chain on his neck, and rule third in the kingdom." ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
8 Then all the king's wise men came in, but none could read the writing or tell him its meaning. ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
9 So King Belshazzar grew even more terrified, his face paler still, and his nobles were bewildered. ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.
10 At the king's and his nobles' words, the queen entered the banquet hall, saying, "King, live forever! Don't let your thoughts terrify you or your face turn pale. ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
11 A man in your kingdom has the spirit of the holy gods. In your father's days he showed insight, understanding, and wisdom like the gods' wisdom. King Nebuchadnezzar your father—your father the king—made him chief of magicians, enchanters, astrologers, and fortune-tellers, “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
12 because extraordinary spirit, knowledge, and understanding—interpreting dreams, explaining riddles, untying knots—were found in this Daniel, whom the king named Belteshazzar. Now call Daniel; he will interpret." ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
13 Daniel was brought before the king, who asked, "Are you Daniel, one of the Judean exiles my father the king brought from Judah? ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
14 I heard the spirit of the gods is in you—light, understanding, and rare wisdom found in you. ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
15 The wise men and enchanters were brought before me to read this writing and tell me its meaning, but couldn't. “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
16 I've heard you can interpret and untie knots. If you read this writing and tell me its meaning, you'll wear purple, a gold chain on your neck, and rule third in the kingdom." ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
17 Daniel answered the king, "Keep your gifts; give your rewards to another. Still, I will read the king the writing and tell him its meaning. ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
18 Your Majesty, the Most High our Father gave your father Nebuchadnezzar the kingdom, greatness, glory, and majesty. ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
19 Because of the greatness he gave him, all peoples, nations, and languages trembled and feared before him. He killed whom he wished, let live whom he wished, raised whom he wished, humbled whom he wished. ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
20 When his heart grew proud and his spirit hardened into arrogance, he was deposed from his royal throne and his glory taken away. “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
21 He was driven from people, his mind made like an animal's; he lived with wild donkeys, was fed grass like an ox, and the dew of heaven soaked him—until he knew the Most High our Father rules the kingdom of men and sets over it whomever he chooses. ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
22 But you, Belshazzar his son, have not humbled your heart, though you knew all this. “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.
23 Instead, you lifted yourself against heaven's Sovereign. You had his house's vessels brought before you, and you, your nobles, wives, and concubines drank wine from them. You praised gods of silver, gold, bronze, iron, wood, and stone—gods that cannot see, hear, or know anything. But the One holding your breath in his hand, who owns all your ways—our Father—you have not honored. ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
24 Therefore he sent the hand that wrote this inscription. ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.
25 This is the writing that was inscribed: MENE, MENE, TEKEL, PARSIN. “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
26 This is what it means: MENE—our Father counted your kingdom's days and ended it. ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
27 TEKEL—you have been weighed on the scales and found wanting. ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.
28 PERES—your kingdom has been divided and given to the Medes and Persians." ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
29 Then Belshazzar gave the order, and they clothed Daniel in purple, put a gold chain on his neck, and proclaimed him third ruler in the kingdom. ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
30 That very night Belshazzar, king of the Babylonians, was killed. ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
31 And Darius the Mede received the kingdom, being about sixty-two years old. ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]