Skip to content
The Believer's Library

Indian Revised Version (IRV) Kannada - 2019

Daniel 6 IRVKan

Show IRVKan only
Verse × ×
1 Darius appointed 120 satraps over the kingdom, stationed throughout the whole kingdom, ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
2 and three officials over them, one of them Daniel, so the satraps would answer to them and the king lose nothing. ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
3 Daniel outshone the administrators and satraps, because an extraordinary spirit was in him, and the king planned to set him over the whole kingdom. ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
4 Administrators and satraps sought grounds to charge Daniel over the kingdom, but found none—no corruption—since he was faithful; no negligence or corruption was found in him. ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
5 Then these men said, "We'll find no charge against Daniel unless we find one in his God's law." ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
6 So the administrators and satraps went together to the king and said, "King Darius, live forever! ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
7 All the kingdom's administrators, prefects, satraps, counselors, and governors agreed the king should issue a royal statute and firm decree: whoever petitions any god or man but you, king, for thirty days, will be thrown into the lions' den. ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
8 Now, king, issue the decree and sign it in writing, unalterable, under the law of the Medes and Persians, which cannot be revoked. ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
9 So King Darius signed the document and the ordinance." ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
10 Learning the decree was signed, Daniel went home to his upstairs room, windows open toward Jerusalem, knelt three times daily, and prayed, giving thanks before his Father as always. ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
11 Then these men came together and found Daniel praying and pleading for mercy before his Father. ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
12 They approached the king about the decree: "Did you not sign a decree that for thirty days, anyone petitioning any god or man except you, king, would be thrown into the lions' den?" The king answered, "The matter stands, by the law of the Medes and Persians, unchangeable." ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
13 They told the king, "Daniel, one of Judah's exiles, ignores you, king, and your signed decree—praying three times daily." ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
14 Hearing this, the king was deeply troubled, determined to save Daniel, and worked until sunset to rescue him. ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
15 Then these men gathered before the king and said, "Know, king: by law of the Medes and Persians, no decree or edict the king issues can be changed." ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
16 Then the king gave the command, and they brought Daniel and threw him into the lions' den. The king said to Daniel, "May your God, whom you serve continually, rescue you." ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
17 A stone was brought, placed over the den's mouth, and sealed by the king with his signet ring and his nobles' rings, so nothing about Daniel could change. ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
18 Then the king went to his palace and fasted that night; no entertainment was brought before him, and sleep fled from him. ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
19 Then, at the first light of dawn, the king rose and hurried to the den of lions. ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
20 Nearing the den, he cried out to Daniel anxiously. The king said to Daniel, "Daniel, servant of the living God, has your God, whom you serve continually, been able to rescue you from the lions?" ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
21 Then Daniel said to the king, "King, may you live forever! ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
22 My Father sent his angel and shut the lions' mouths. They haven't harmed me, because I was found innocent before him, and before you, king, I've done no wrong." ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
23 The king was overjoyed and ordered Daniel lifted from the den. Daniel was lifted out with no injury at all, for he had trusted in his Father. ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
24 The king ordered the men who had falsely accused Daniel brought and thrown into the lions' den—with their children and wives. Before they reached the bottom, the lions overpowered them and crushed all their bones. ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
25 Then King Darius wrote to all peoples, nations, and languages living on earth: "May your peace overflow! ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
26 I decree: in all my kingdom, people must tremble and fear before Daniel's God—the living God, enduring forever. His kingdom will never be destroyed; his rule never ends. “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
27 He rescues and delivers; he works signs and wonders in the heavens and on the earth; he is the one who rescued Daniel from the power of the lions." ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
28 So this Daniel thrived in the reign of Darius and of Cyrus the Persian. ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]