Skip to content
The Believer's Library

Indian Revised Version (IRV) Kannada - 2019

Daniel 8 IRVKan

Show IRVKan only
Verse × ×
1 In King Belshazzar's third year, a vision appeared to me, Daniel, after the earlier one. ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.
2 In the vision I was in the citadel of Susa, in Elam province; and in the vision I was beside the Ulai Canal. ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
3 I looked up: a ram stood before the canal, two tall horns—one taller than the other, the taller coming up last. ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
4 I watched the ram charging west, north, and south. No animal could stand against him, none could rescue from his power. He did as he pleased and grew great. ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
5 As I was considering this, suddenly a male goat came from the west across the whole earth without touching the ground; it had a prominent horn between its eyes. ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.
6 He came to the two-horned ram I saw standing by the canal and ran at it in raging power. ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
7 I saw him reach the ram, enraged, striking and shattering its two horns. The ram had no strength to stand against him; the goat threw it down and trampled it, and no one could rescue the ram from his power. ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
8 The goat grew very great, but at its full strength the great horn broke, and four prominent horns grew up in its place toward the four winds of heaven. ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.
9 From one of them a little horn came out, growing very great toward the south, east, and the glorious land. ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
10 It grew great, up to the host of heaven, casting down to earth some of the host and of the stars, and trampled them. ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
11 It made itself great against the Prince of the host; the Prince's regular offering was removed and his sanctuary's place thrown down. ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
12 Because of wrongdoing, the army was handed over to it with the daily offering; it threw truth to the ground and acted and thrived. ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
13 Then I heard a holy one speaking, and another holy one asked the speaker, "How long is the vision—the regular offering, the wrongdoing that brings desolation, sanctuary and host handed over to trampling?" ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
14 He told me, "For 2,300 evenings and mornings; then the sanctuary will be restored to its rightful state." ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
15 As I, Daniel, watched the vision seeking to understand, one like a man stood before me. ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
16 I heard a human voice from the Ulai calling, "Gabriel, make this man understand the vision." ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.
17 He came near where I stood, and as he drew close I was terrified and fell facedown. He said to me, "Understand, son of man: the vision is for the time of the end." ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
18 As he spoke, I fell into a deep sleep, face to the ground; but he touched me and set me on my feet. ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,
19 He said, "Listen, I will tell you what will happen in the later time of the wrath, for it concerns the appointed time of the end. “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
20 The ram you saw with the two horns is the kings of Media and Persia. ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.
21 The shaggy goat is Greece's king; the great horn between his eyes is the first king. ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.
22 The broken horn, four rising in its place: four kingdoms rise from his nation, but without his power. ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
23 At the end of their reign, when sinners reach full measure, a fierce-faced king skilled in intrigue will arise. ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.
24 His power will be great—but not his own—and he will cause terrible destruction, prosper, and act. He will destroy the mighty and the people of the holy ones. ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.
25 By cunning he makes deceit thrive under his hand, and in his heart he lifts himself up. Without warning he destroys many, and rises against the Prince of princes—yet he will be broken, by no human hand. ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
26 The vision of the evenings and mornings told to you is true, but seal it up, for it concerns days far off." ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
27 I, Daniel, was overcome and sick for days. Then I got up and did the king's business, but the vision left me appalled, beyond understanding. ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]