Skip to content
The Believer's Library

Indian Revised Version (IRV) Kannada - 2019

Ecclesiastes 4 IRVKan

Side by side with the Father's Heart Bible™

ದಬ್ಬಾಳಿಕೆ, ಶ್ರಮೆ, ವೈರತ್ವ

1ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು.ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು.ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ.ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

2ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.

3ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ,ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.

4ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

5ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ,ತನ್ನನ್ನು ತಾನು ನಾಶಪಡಿಸಿಕೊಳ್ಳುವನು.

6ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.

7ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

8ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ.ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ.ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ,ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ.ಅವನು, “ನಾನು ಸುಖವನ್ನು ತೊರೆದುಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು.ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

9ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.

10ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು.ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ,ಅವನ ಗತಿ ದುರ್ಗತಿಯೇ.

11ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ,ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?

12ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು.ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.

ರಾಜಕೀಯ ಶಕ್ತಿಯು ವ್ಯರ್ಥ

13ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು. 14ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

15ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು. 16ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]