Skip to content
The Believer's Library

Indian Revised Version (IRV) Kannada - 2019

Genesis 1 IRVKan

Show IRVKan only
Verse × ×
1 In the beginning, our Heavenly Father created the heavens and the earth. ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
2 The earth was formless and empty; darkness lay over the deep's surface, and the Spirit of our Father was hovering over the waters' surface. ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
3 Then our Father said, "Let there be light," and there was light. ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
4 He saw that the light was good, and he separated the light from the darkness. ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
5 He called the light "day" and called the darkness "night." There was evening, and there was morning—the first day. ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
6 And our Father said, "Let there be an expanse between the waters to separate water from water." ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
7 He made the expanse and separated the water under it from the water above it. And it was so. ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
8 He called the expanse "sky." So there was evening, and there was morning—the second day. ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
9 Then our Father said, "Let the water under the sky be gathered to one place, and let dry ground appear." And it was so. ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
10 He named the dry ground "land," the gathered waters "seas." And he saw it was good. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11 Then he said, "Let the land grow vegetation: seed-bearing plants, fruit trees bearing fruit with seed in it, after its kind." And it was so. ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12 The land produced vegetation—seed-bearing plants by kind, and trees bearing seed-bearing fruit by kind—and our Father saw that it was good. ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
13 And there was evening, and there was morning—the third day. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
14 And our Father said, "Let there be lights in the sky's expanse to separate day from night, and serve as signs to mark seasons, days, and years, ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15 and let them be lights in the sky's expanse, to give light on the earth." And it was so. ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
16 Our Father made two great lights—the greater light to rule the day, the lesser light to rule the night. He also made the stars. ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
17 He set them in the expanse of the sky to give light on the earth, ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
18 to rule the day and the night, and to separate light from darkness. He saw it was good. ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
19 So there was evening, and there was morning—the fourth day. ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
20 Then our Father said, "Let the water swarm with living creatures, and let birds fly above the earth, across the sky's expanse." ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21 So he created the great sea creatures, every living creature that moves and swarms in the water by its kind, and every winged bird by its kind. And he saw it was good. ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22 Our Father blessed them and said, "Be fruitful, multiply, fill the waters in the seas, and let birds multiply on earth." ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
23 And there was evening, and there was morning—the fifth day. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
24 And our Father said, "Let the land produce living creatures by kind: livestock, crawling creatures, and wild animals, each by kind." And it was so. ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25 He made wild animals by their kind, livestock by their kind, and every creature crawling the ground by its kind. And he saw that it was good. ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26 Then our Father said, "Let us make humanity in our image, in our likeness, to rule the fish of the sea, the birds of the sky, the livestock, all the earth, and every creature crawling on the ground." ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27 So our Father created humanity in his own image; in the image of God he created them; male and female he created them. ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28 Our Father blessed them and said to them, "Be fruitful, multiply, fill the earth and subdue it. Rule the fish of the sea, the birds of the sky, and every living creature that moves on the earth." ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29 Then he said, "I give you every seed-bearing plant across the whole earth, and every tree with seed-bearing fruit—they will be your food. ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30 To every animal of the earth, every bird of the sky, everything crawling on the ground with breath of life, I give every green plant for food." And so it happened. ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
31 Our Father saw all he had made, and it was very good. So there was evening, and there was morning—the sixth day. ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]