Skip to content
The Believer's Library

Indian Revised Version (IRV) Kannada - 2019

Genesis 2 IRVKan

Show IRVKan only
Verse × ×
1 So the heavens and the earth were completed in all their vast array. ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
2 By the seventh day our Father had completed his work, and he rested on the seventh day from everything he had made. ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
3 And our Father blessed the seventh day, making it holy, because on it he rested from all the work of creation he had done. ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
4 This is the history of the heavens and the earth when they were created, when our Father made earth and heavens. ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
5 No shrub of the field yet existed on the earth, no plant of the field had yet sprouted, for our Father had not sent rain on the earth, and there was no man to work the ground, ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 but springs came up from the earth and watered the whole surface of the ground. ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
7 Then our Father formed the man from dust of the ground, breathed into his nostrils the breath of life, and the man became a living person. ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
8 Then our Father planted a garden in Eden, in the east, and put there the man he had formed. ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
9 From the ground our Father grew every tree lovely to see and good to eat, with the tree of life in the garden's center and the tree of knowing good and evil. ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
10 A river flowed from Eden to water the garden; from there it divided into four rivers. ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
11 The first is named Pishon; it flows around all the land of Havilah, where gold is found. ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
12 The gold of that land is good; aromatic resin and onyx are also there. ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
13 The name of the second river is the Gihon; it winds through the entire land of Cush. ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
14 The third river's name is Tigris, flowing east of Assyria. The fourth river is the Euphrates. ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
15 Our Father took the man and set him in the garden of Eden to work it and guard it. ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
16 And our Father commanded the man, "You are free to eat from any tree in the garden; ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
17 but you must not eat from the tree of knowledge of good and evil, for you will surely die the day you eat from it." ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
18 Then our Father said, "It is not good for the man to be alone. I will make a helper matching him." ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
19 From the ground our Father formed every field animal and every sky bird, then brought each to the man to see what he'd name it. Whatever the man named each living creature, that was its name. ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
20 The man named all livestock, birds of the sky, and all wild animals, but for Adam no helper matching him was found. ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
21 So our Father made the man fall into a deep sleep, and while he slept, took one of his ribs and closed the flesh over it. ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
22 Then our Father built a woman from the rib he took from the man, and brought her to the man. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
23 The man said, "At last! This is bone of my bones and flesh of my flesh; she will be called 'woman,' for she was taken out of man." “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
24 So a man leaves his father and mother, joins his wife, and they become one flesh. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
25 The man and his wife were both naked, and they were not ashamed. ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]