Skip to content
The Believer's Library

Indian Revised Version (IRV) Kannada - 2019

Genesis 3 IRVKan

Show IRVKan only
Verse × ×
1 The serpent was shrewder than any field animal our Father had made. He asked the woman, "Did God really say, 'You must not eat from any tree in the garden'?" ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
2 The woman said to the serpent, "We may eat the fruit from the trees in the garden, ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
3 but God said, 'Don't eat the tree's fruit in the garden's middle, or touch it, or you'll die.'" ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
4 But the serpent said to the woman, "You will certainly not die. ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
5 God knows that when you eat from it, your eyes will open and you'll be like God, knowing good and evil." ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
6 The woman saw the tree was good for food, delightful to the eyes, and desirable for wisdom. She took its fruit, ate, gave some to her husband with her, and he ate. ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
7 Then the eyes of both of them were opened, and they knew they were naked; they sewed fig leaves together and made themselves coverings. ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
8 They heard the sound of our Father walking in the garden in the cool of the day, and the man and his wife hid from his presence among the garden's trees. ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
9 But our Father called to the man and said to him, "Where are you?" ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
10 The man said, "I heard you in the garden and was afraid, for I was naked, so I hid." ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
11 Our Father said, "Who told you you're naked? Did you eat from the tree I forbade you to eat from?" ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
12 The man said, "The woman you put with me gave me fruit from the tree, and I ate." ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
13 Then our Father asked the woman, "What have you done?" She said, "The serpent deceived me, and I ate." ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
14 So our Father said to the serpent, "Because you have done this, cursed are you above all livestock and above all wild animals; on your belly you will go, and dust you will eat all the days of your life. ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
15 And I will put enmity between you and the woman, and between your offspring and her offspring; he will crush your head, and you will strike his heel." ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
16 To the woman he said, "I will greatly increase your pain in childbirth; in pain you will give birth to children. Your desire will be for your husband, and he will rule over you." ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
17 And to Adam he said, "Because you listened to your wife and ate from the tree that I commanded you, saying, 'You must not eat from it,' cursed is the ground because of you; through painful toil you will eat from it all the days of your life. ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
18 It will produce thorns and thistles for you, and you will eat the plants of the field. ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
19 By the sweat of your brow you will eat your bread until you return to the ground, since from it you were taken; for dust you are, and to dust you will return." ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
20 The man named his wife Eve, because she would become the mother of all the living. ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
21 Our Father made garments of skin for Adam and his wife, and he clothed them. ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
22 Then our Father said, "Look, the man has become like one of us, knowing good and evil. Now, so he doesn't reach out, take from the tree of life too, eat, and live forever…" ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
23 So our Father sent him out of the garden of Eden to work the ground he was taken from. ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
24 He drove out the man and placed cherubim and a whirling, flaming sword east of Eden's garden, guarding the way to the tree of life. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]