Skip to content
The Believer's Library

Indian Revised Version (IRV) Kannada - 2019

Genesis 45 IRVKan

Show IRVKan only
Verse × ×
1 Joseph could not control himself before everyone standing by him, so he cried out, "Send everyone away from me!" No one stayed with him when Joseph made himself known to his brothers. ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
2 He wept so loudly that the Egyptians heard it, and Pharaoh's household heard it. ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.
3 Joseph said to his brothers, "I am Joseph! Is my father still alive?" His brothers could not answer him, for they were terrified at his presence. ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
4 Joseph said to his brothers, "Please, come close to me." They came close. He said, "I am your brother Joseph, whom you sold into Egypt. ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
5 Now don't be distressed or angry with yourselves for selling me here, since our Father sent me ahead of you to preserve life. ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
6 Famine has been in the land two years now; five more years remain with no plowing or harvest. ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
7 Our Father sent me ahead of you to preserve a remnant for you on earth, and keep you alive as a great band of survivors. ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
8 So now, it wasn't you who sent me here, but our Father—he made me father to Pharaoh, lord of all his household, and ruler over all the land of Egypt. “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
9 Hurry, go up to my father, tell him: Your son Joseph says: Our Father has made me lord of all Egypt. Come down to me; don't delay. ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
10 You'll live in Goshen, near me—you, your children, your children's children, your flocks, your herds, all you own. ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
11 I will provide for you there—five years of famine remain—so you, your household, and all you own don't fall into poverty. ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
12 Your eyes see, and my brother Benjamin's eyes see, that it is my own mouth speaking to you. “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
13 Tell my father all my honor in Egypt, and all you have seen. Hurry and bring my father down here. ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,
14 Then he threw his arms around his brother Benjamin and wept, and Benjamin wept on his neck." ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
15 He kissed all his brothers and wept over them. After that his brothers talked with him. ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
16 News reached Pharaoh's house: "Joseph's brothers have come." It pleased Pharaoh and his officials. ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
17 Pharaoh said to Joseph, "Say to your brothers: do this—load your animals, go, return to the land of Canaan. ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
18 Take your father and your households and come to me. I will give you the best of Egypt's land, and you will eat the richness of the land. ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
19 You are commanded: tell them, 'Do this—take wagons from Egypt for your children and wives, bring your father, and come. ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
20 Don't worry about your belongings—the best of all Egypt's land is yours.'" ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
21 The sons of Israel did so; Joseph gave them wagons per Pharaoh's order, and gave them provisions for the road. ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
22 He gave each a change of clothes, but Benjamin 300 pieces of silver and five changes of clothes. ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
23 He sent his father ten donkeys loaded with Egypt's best, and ten female donkeys loaded with grain, bread, and food for his journey. ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
24 He sent his brothers off; as they left, he said, "Don't quarrel on the way." ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
25 So they left Egypt and came to their father Jacob in Canaan. ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
26 They told him, "Joseph is still alive—ruler over all Egypt!" But his heart went numb; he didn't believe them. ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
27 But when they told him all Joseph's words to them, and he saw the wagons Joseph sent to carry him, their father Jacob's spirit revived. ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
28 Israel said, "Enough! Joseph my son is still alive. I will go and see him before I die." ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]