Skip to content
The Believer's Library

Indian Revised Version (IRV) Kannada - 2019

Hosea 12 IRVKan

Side by side with the Father's Heart Bible™

1ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ.ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ;ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

2ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ,ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು,ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.

3ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು,ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

4ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು.ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.

5ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.

6ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ;ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

7ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.

8ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ;ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

9ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

10ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ.ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.

11ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು;ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ?ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

12ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು;ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.

13ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು;ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.

14ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ,ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ,ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]