Skip to content
The Believer's Library

Indian Revised Version (IRV) Kannada - 2019

Hosea 14 IRVKan

Side by side with the Father's Heart Bible™

ದೇವರ ಪ್ರೀತಿಪೂರ್ವಕವಾದ ವಾಗ್ದಾನಗಳು

1ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ;ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

2ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದುಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು;ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

3ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ,ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ,ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ;ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

4ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು;ನನ್ನ ಕೋಪವು ಅವರಿಂದ ತೊಲಗಿಹೋಯಿತು.

5ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು;ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

6ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು,ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.

7ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು;ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

8ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು;ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ;ನನ್ನಿಂದಲೇ ನೀನು ಫಲಿಸುವಿ.

9ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು.ಯೆಹೋವನ ಮಾರ್ಗಗಳು ಸತ್ಯವಾದವುಗಳು;ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]