Skip to content
The Believer's Library

Indian Revised Version (IRV) Kannada - 2019

Isaiah 12 IRVKan

Side by side with the Father's Heart Bible™

ಯೆಹೋವನ ಸ್ತೋತ್ರಗೀತೆಗಳು

1ಆ ದಿನದಲ್ಲಿ ನೀನು ಹೇಳುವುದೇನೆಂದರೆ,“ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]