Skip to content
The Believer's Library

Indian Revised Version (IRV) Kannada - 2019

James 1 IRVKan

Show IRVKan only
Verse × ×
1 James, a servant of our Father and the Lord Jesus Christ, to the twelve tribes scattered among the nations: greetings. ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
2 Consider it pure joy, my brothers and sisters, whenever you face trials of many kinds, ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
3 because you know that the testing of your faith produces perseverance. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
4 Let perseverance finish its work so that you may be mature and complete, lacking nothing. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
5 If any of you lacks wisdom, ask our Father, who gives freely to all without criticizing, and it will be given you. ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
6 Ask in faith, without doubting, for the doubter is like a sea wave, driven and tossed by the wind. ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
7 That person should not expect to receive anything from our Father. ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
8 Such a person is double-minded and unstable in all their ways. ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
9 Let the believer in humble circumstances take pride in their high position, ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
10 but let the rich boast in their low state, since they'll pass like a wildflower. ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
11 The sun rises with scorching heat and withers the grass. Its flower falls; its beauty vanishes. So the rich fade away amid their pursuits. ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
12 Blessed is the one who endures trial, because once tested they'll receive the crown of life our Father promised to those who love him. ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
13 When tempted, no one should say, "Our Father is tempting me." Evil can't tempt our Father, and he tempts no one. ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
14 But each person is tempted, dragged away and lured by their own evil desire. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
15 Then desire conceives and gives birth to sin; sin, full-grown, gives birth to death. ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
16 Don't be deceived, my dear brothers and sisters. ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
17 Every good and perfect gift is from above, coming down from the Father of lights, who never changes or casts a shifting shadow. ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
18 By his choice, he gave us birth through the word of truth, so we'd be a kind of firstfruits of his creation. ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
19 Know this, my dear brothers and sisters: everyone should be quick to listen, slow to speak, slow to anger, ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
20 because human anger does not produce the righteousness of our Father. ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
21 So strip off all moral filth and excess evil; humbly receive the word planted in you, able to save your souls. ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
22 Do not merely listen to the word, and so deceive yourselves. Do what it says. ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
23 Anyone who hears the word but doesn't act on it is like one who looks at his natural face in a mirror, ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
24 and, after looking at himself, goes away and immediately forgets what he looks like. ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
25 But whoever peers into the perfect law of freedom, continuing in it—not a forgetful hearer but a doer who acts—will be blessed in his doing. ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
26 If anyone thinks himself religious but doesn't control his tongue, he deceives his own heart—his religion is worthless. ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
27 Pure and spotless religion before our Father is this: caring for orphans and widows in their distress, and keeping oneself unstained from the world. ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]