Skip to content
The Believer's Library

Indian Revised Version (IRV) Kannada - 2019

James 3 IRVKan

Show IRVKan only
Verse × ×
1 My brothers and sisters, not many of you should become teachers, since we teachers face stricter judgment. ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
2 For we all stumble in many ways. Anyone who never stumbles in speech is a mature man, able to control his whole body too. ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3 If we put bits in horses' mouths to make them obey us, we guide their whole bodies too. ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
4 Consider ships too: though large and driven by strong winds, a tiny rudder steers them wherever the pilot wants. ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
5 So too the tongue is a small body part, yet boasts great things. See how small a fire sets ablaze a great forest! ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
6 The tongue is a fire, a world of wickedness placed among our body's parts. It stains the whole body, sets the whole course of life ablaze, and is itself set ablaze by hell. ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
7 Every kind of beast, bird, reptile, and sea creature is tamed, and has been tamed, by humankind, ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
8 but no human being can tame the tongue. It is a restless evil, full of deadly poison. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
9 With it we bless our Father; with it we curse people made in the likeness of our Father. ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10 From the same mouth come blessing and cursing. My brothers and sisters, this should not be. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
11 Does a spring pour out both fresh and bitter water from the same opening? ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
12 Brothers and sisters, can a fig tree bear olives, or a vine figs? Neither can a salt spring yield fresh water. ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
13 Who is wise and understanding among you? Let him show his deeds through good conduct, in wisdom's humility. ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
14 But if bitter envy and selfish ambition fill your heart, don't boast or lie against the truth. ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
15 This is not the wisdom that comes down from above, but is earthly, unspiritual, demonic. ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
16 For where there is jealousy and selfish ambition, there will be disorder and every vile practice. ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
17 Wisdom from above: pure first, then peace-loving, gentle, reasonable, full of mercy and good fruit, unbiased, sincere. ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
18 And the harvest of righteousness is sown in peace by those who make peace. ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]