Skip to content
The Believer's Library

Indian Revised Version (IRV) Kannada - 2019

John 1 IRVKan

Show IRVKan only
Verse × ×
1 In the beginning was the Word, and the Word was with our Father, and the Word was God. ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
2 He was in the beginning with our Father. ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.
3 All things were made through him, and without him not one thing was made that was made. ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
4 In him was life, and the life was the light of all people. ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
5 The light shines in the darkness, and the darkness has not overcome it. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
6 There came a man sent from our Father, whose name was John. ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.
7 He came as a witness, to bear witness about the light, so that all might believe through John's witness. ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
8 He was not the light, but came to bear witness about the light. ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
9 The true light, which gives light to everyone, was coming into the world. ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
10 He was in the world. The world came into being through him, yet did not know him. ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
11 He came to his own, and his own people did not receive him. ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.
12 But to all who received him, believing in his name, he gave the right to become children of our Father, ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
13 children born not of blood nor of the will of flesh nor of the will of man, but of our Father. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
14 The Word became flesh and lived among us. We saw his glory, the glory of the one and only Son from the Father, full of grace and truth. ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
15 John testified about him, crying out, "This is the one I meant: he who comes after me outranks me, since he existed before me." ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
16 For from his fullness we have all received, grace upon grace. ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
17 For the law was given through Moses; grace and truth came through Jesus Christ. ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
18 No one has ever seen our Father; the one and only God, close beside the Father, has made him known. ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
19 This is John's testimony, when the Jews sent priests and Levites from Jerusalem to ask him, "Who are you?" ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
20 He confessed, and did not deny, but confessed, "I am not the Christ." ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
21 So they asked him, "What then? Are you Elijah?" "I am not," he said. "Are you the Prophet?" "No," he answered. ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
22 So they asked, "Who are you? We need to give an answer to those who sent us. What do you say about yourself?" ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
23 He said, "I'm the voice of one crying out in the wilderness, 'Make straight the way of the Lord,' as the prophet Isaiah said." ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
24 Now they had been sent from the Pharisees. ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
25 They asked him, "Why baptize, then, if you're not the Christ, nor Elijah, nor the Prophet?" ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
26 John answered them, "I baptize with water, but among you stands one you do not know, ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.
27 even he who comes after me, whose sandal strap I am not worthy to untie." ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
28 These things took place in Bethany across the Jordan, where John was baptizing. ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
29 The next day, seeing Jesus coming toward him, he said, "Look! The Lamb of our Father—Jesus—who takes away the sin of the world! ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
30 This is the one I meant: 'After me comes a man who ranks before me, because he was before me.' ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
31 I didn't know him, but I came baptizing with water so he would be revealed to Israel." ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
32 John testified: "I saw the Holy Spirit descend from heaven like a dove and remain on him. ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
33 I didn't know him, but the one who sent me to baptize with water told me, 'The one you see the Holy Spirit come down and stay on—he is the one who baptizes with the Holy Spirit.' ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
34 And I have seen and have borne witness that this is the Son of our Father." ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
35 The next day John was standing again with two of his disciples, ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,
36 and looking at Jesus as he walked by, he said, "Look! The Lamb of our Father!" ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
37 The two disciples heard him say this, and they followed Jesus. ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
38 Jesus turned, saw them following, and asked, "What do you seek?" They said, "Rabbi" (meaning Teacher), "where do you stay?" ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
39 He told them, "Come and you will see." So they went and saw where he was staying, and remained with him that day—about four in the afternoon. ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.
40 One of the two who heard John speak and followed Jesus was Andrew, Simon Peter's brother. ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.
41 He first found his own brother Simon and told him, "We've found the Messiah" (meaning Christ). ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
42 He brought him to Jesus. Jesus looked at him and said, "You are Simon the son of John. You will be called Cephas" (meaning Peter). ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
43 The next day, Jesus decided to leave for Galilee. He found Philip and said, "Follow me." ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.
44 Now Philip was from Bethsaida, the city of Andrew and Peter. ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.
45 Philip found Nathanael and told him, "We've found the one Moses wrote of in the Law and the prophets—Jesus, son of Joseph, from Nazareth." ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
46 Nathanael said, "Can anything good come from Nazareth?" Philip said, "Come and see." ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
47 Jesus saw Nathanael approaching and said of him, "Look—a true Israelite, with no deceit in him!" ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
48 Nathanael asked him, "How do you know me?" Jesus answered, "Before Philip called you, while you were under the fig tree, I saw you." ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
49 Nathanael answered him, "Rabbi, you are the Son of our Father! You are the King of Israel!" ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
50 Jesus answered him, "You believe because I told you I saw you under the fig tree? You'll see greater things than these." ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
51 He told him, "Truly, truly, I say to you, you will see heaven opened, and our Father's angels ascending and descending on the Son of Man." ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]