Skip to content
The Believer's Library

Indian Revised Version (IRV) Kannada - 2019

John 12 IRVKan

Show IRVKan only
Verse × ×
1 Six days before Passover, Jesus came to Bethany, where Lazarus, whom Jesus raised from death, lived. ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
2 There they gave him a dinner; Martha served, and Lazarus was one of those at the table with him. ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
3 Mary took about a pint of pure nard perfume, expensive, and anointed Jesus' feet, then wiped his feet with her hair. The house filled with the fragrance of the perfume. ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
4 But Judas Iscariot, one of his disciples, the one who was about to betray him, said, ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
5 "Why was this perfume not sold for about a year's wages and given to the poor?" “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
6 He said this not because he cared about the poor, but because he was a thief who kept the money box, taking what was put in it. ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
7 So Jesus said, "Leave her alone. She has kept this for the day of my burial. ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
8 You will always have the poor among you, but you will not always have me." ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9 A large crowd of Jews learned Jesus was there and came, not only for him but to see Lazarus, whom he had raised from the dead. ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
10 So the chief priests planned to kill Lazarus as well, ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 because on account of him many of the Jews were going over and believing in Jesus. ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 The next day, the large crowd that came for the feast heard Jesus was coming to Jerusalem. ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13 They took palm branches and went out to meet him, shouting, "Hosanna! Blessed is he who comes in the name of our Father—the King of Israel!" ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14 Jesus found a young donkey and rode on it, just as it is written: ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15 "Do not be afraid, daughter of Zion; look, your king is coming, seated on a donkey's colt." ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16 His disciples didn't understand these things at first; but when Jesus was glorified, they remembered these things were written about him, and that they had done these things to him. ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17 The crowd that was with him when he called Lazarus from the tomb and raised him from the dead kept testifying. ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18 The crowd went to meet him because they heard he had done this sign. ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19 So the Pharisees said to each other, "See, you're accomplishing nothing—the whole world has gone after him." ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 Now there were some Greeks among those who went up to worship at the feast. ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21 These came to Philip, from Bethsaida in Galilee, and asked him, "Sir, we want to see Jesus." ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 Philip went and told Andrew; then Andrew and Philip went and told Jesus. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 Jesus replied to them, "The hour has come for the Son of Man to be glorified. ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 Truly, truly, I tell you, unless a wheat grain falls to the ground and dies, it stays alone; but if it dies, it bears much fruit. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 Whoever loves his life loses it; whoever hates his life in this world keeps it for eternal life. ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26 Whoever serves me must follow me, so my servant will be where I am. Whoever serves me, my Father will honor him." ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 "Now my soul is troubled. What should I say—'Father, save me from this hour'? But this is why I came to this hour. Father, glorify your name." ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28 Then a voice came from heaven: "I have glorified it, and I will glorify it again." ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29 The crowd standing there heard it and said it thundered; others said an angel spoke to him. ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30 Jesus said, "This voice came for your sake, not mine. ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31 Now is the judgment of this world; now the ruler of this world will be cast out. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32 And I, when I am lifted up from the earth, will draw all people to myself." ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33 He said this to show by what kind of death he was going to die. ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34 The crowd replied, "We've heard from the Law that the Christ stays forever. How can you say the Son of Man must be lifted up? Who is this Son of Man?" ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
35 So Jesus said, "The light is with you a little while longer. Walk while you have light, so darkness doesn't overtake you. Whoever walks in darkness doesn't know where he's going. ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36 While you have light, believe in the light, so you become children of light." Having said this, Jesus left and hid from them. ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37 Though he had performed so many signs in their presence, they still would not believe in him, ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38 so that the word of Isaiah the prophet would be fulfilled, which he spoke: "Father, who has believed our message? And to whom has the arm of our Father been revealed?" ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39 This is why they could not believe, for Isaiah said again: ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40 "He has blinded their eyes and hardened their heart, so that they would not see with their eyes, nor understand with their heart, nor turn—and I would heal them." “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41 Isaiah said these things because he saw Jesus' glory and spoke about him. ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42 Still, many even of the rulers believed in him, but they didn't admit it because of the Pharisees, so they wouldn't be expelled from the synagogue, ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43 for they loved the glory that comes from people more than the glory that comes from our Father. ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44 Jesus cried out, "Whoever believes in me does not believe in me only, but in the one who sent me. ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45 And whoever sees me sees the one who sent me. ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46 I came into the world as light, so no one who believes in me stays in the darkness. ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 If anyone hears my words and doesn't keep them, I don't judge him—I didn't come to judge the world, but to save the world. ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48 Whoever rejects me and doesn't accept my words already has a judge: my spoken word will judge him on the last day. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
49 I have not spoken on my own; but the Father who sent me himself commanded me what to say and how to speak. ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
50 I know his commandment is eternal life, so I say only what the Father told me to say." ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]