Skip to content
The Believer's Library

Indian Revised Version (IRV) Kannada - 2019

John 13 IRVKan

Show IRVKan only
Verse × ×
1 Now, before the Passover festival, Jesus knew his hour had come to leave this world to his Father. Having loved his own in the world, he loved them to the end. ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
2 During supper, the devil had already put into Judas son of Simon Iscariot's heart the plan to betray Jesus. ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
3 Jesus, knowing that the Father had given everything into his hands, and that he had come from him and was returning to him, ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
4 rose from supper, took off his outer clothes, picked up a towel, and tied it around his waist. ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
5 Then he poured water into a basin and began washing the disciples' feet, drying them with the towel tied around him. ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
6 He came to Simon Peter, who said to him, "Lord, are you going to wash my feet?" ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
7 Jesus answered him, "You do not realize now what I am doing, but later you will understand." ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
8 "You will never wash my feet," Peter said. Jesus answered, "Unless I wash you, you share nothing with me." ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
9 Simon Peter said to him, "Lord, not only my feet, but also my hands and head!" ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
10 Jesus told him, "One who has bathed needs only to wash his feet—he is fully clean. You are clean, but not all of you." ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
11 He knew who would betray him; that's why he said, "Not all of you are clean." ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
12 After washing their feet and dressing, he reclined again and said to them, "Do you understand what I have done for you? ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13 You call me Teacher and Lord, and rightly so, for that is what I am. ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14 So if I, your Lord and Teacher, washed your feet, you too must wash each other's feet. ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15 For I have given you an example, that you should do as I have done for you. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16 Truly, truly, I say to you, a servant isn't greater than his master, nor a messenger greater than his sender. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17 If you know these things, you are blessed if you do them. ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18 "I don't mean all of you—I know those I've chosen. But Scripture must be fulfilled: 'The one eating my bread has raised his heel against me.' ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
19 I tell you now, before it happens, so you'll believe, once it happens, that I AM. ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
20 Truly, truly, I tell you, whoever welcomes someone I send welcomes me, and whoever welcomes me welcomes the one who sent me." ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
21 After saying this, Jesus, troubled in spirit, testified, "Truly, truly, I tell you, one of you will betray me." ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
22 The disciples looked at one another, at a loss to know which of them he meant. ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
23 One of his disciples, the one Jesus loved, was reclining at his side. ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
24 So Simon Peter motioned to him to ask which one Jesus meant. ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
25 Leaning back against Jesus, he asked him, "Lord, who is it?" ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
26 Jesus answered, "It's the one I'll give this bread to, once I've dipped it." Then he dipped the bread and gave it to Judas, son of Simon Iscariot. ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
27 After Judas took the bread, Satan entered into him. So Jesus told him, "Do quickly what you're doing." ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
28 But no one reclining at the table understood why he said this to him. ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
29 Since Judas held the money bag, some thought Jesus meant, 'Buy what we need for the feast,' or, 'Give something to the poor.' ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
30 As soon as Judas had taken the bread, he went out. And it was night. ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
31 After Judas left, Jesus said, "Now the Son of Man is glorified, and my Father is glorified in him. ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
32 If my Father is glorified in him, my Father will also glorify the Son in himself and glorify him immediately. ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
33 Dear children, I'm with you a little longer. You'll look for me, and as I told the Jewish leaders, so I tell you now: where I'm going, you can't come. ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34 I give you a new command: love one another. As I have loved you, so you must love one another. ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
35 By this everyone will know that you are my disciples, if you love one another." ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
36 Simon Peter said to him, "Lord, where are you going?" Jesus answered, "Where I'm going you can't follow me now, but you'll follow later." ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
37 Peter asked, "Lord, why can't I follow you now? I'll lay down my life for you." ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
38 Jesus replied, "You will lay down your life for me? Truly, truly, I tell you: the rooster won't crow until you have denied me three times." ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]