Skip to content
The Believer's Library

Indian Revised Version (IRV) Kannada - 2019

John 14 IRVKan

Show IRVKan only
Verse × ×
1 "Do not let your hearts be troubled. Believe in our Father; believe also in me. “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2 In my Father's house are many rooms. If it were not so, would I have told you that I am going to prepare a place for you? ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
3 And if I go and prepare a place for you, I'll come back and take you to myself, so you'll be where I am. ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
4 And you know the way to where I am going." ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
5 Thomas said to him, "Lord, we don't know where you're going—how can we know the way?" ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
6 Jesus told him, "I am the way, and the truth, and the life. No one comes to the Father except through me. ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
7 Had you known me, you would have known my Father too. Starting now, you know him and have seen him." ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
8 Philip said to him, "Lord, show us the Father, and that will be enough for us." ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
9 Jesus said, "Philip, I've been with you this long, and you don't know me? Whoever has seen me has seen the Father. How can you say, 'Show us the Father'? ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
10 Don't you believe I'm in the Father, and the Father in me? The words I speak to you aren't my own—the Father living in me does his works. ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
11 Believe me: I'm in the Father, the Father in me—or else believe because of the works themselves. ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
12 Truly, truly, I tell you, whoever believes in me will do the works I do, and will do even greater works, because I am going to the Father. “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
13 Whatever you ask in my name, I will do it, so the Father may be glorified in the Son. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
14 If you ask me anything in my name, I will do it. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
15 "If you love me, you will keep my commandments. “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
16 And I will ask the Father, and he will give you another Helper, the Holy Spirit, to be with you forever, ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.
17 the Spirit of truth, whom the world cannot receive, since it neither sees him nor knows him. But you know him, since he remains with you and will be in you. ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
18 I will not leave you as orphans; I will come to you. “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
19 Soon the world won't see me anymore, but you will see me. Because I live, you will live too. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
20 On that day you'll know: I'm in my Father, you in me, and I in you. ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
21 Whoever has my commandments and keeps them loves me, and my Father will love whoever loves me. I will love him and show myself to him." ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
22 Judas, not Iscariot, asked, "Lord, why show yourself to us and not to the world?" ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
23 Jesus replied, "Anyone who loves me will keep my word, and my Father will love that person, and we will come to them and make our home with them. ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
24 Whoever doesn't love me doesn't keep my words. And the word you hear isn't mine but the Father's who sent me. ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
25 I have spoken these things to you while I am still with you. “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
26 But the Helper, the Holy Spirit, whom the Father will send in my name, will teach you everything and remind you of everything I said to you. ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
27 Peace I leave you; my own peace I give you. Not as the world gives, I give it. Don't let your hearts be troubled or afraid. “ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
28 You heard me say to you, 'I'm going away, and I'm coming to you.' If you loved me, you'd have rejoiced, because I'm going to the Father, for the Father is greater than I. ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
29 And now I've told you before it happens, so that when it happens you'll believe. ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.
30 I won't talk with you much longer—this world's ruler is coming. He has no hold on me, ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
31 but I do exactly as the Father commanded me, so the world may know I love the Father. Get up, let's leave this place." ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]