Skip to content
The Believer's Library

Indian Revised Version (IRV) Kannada - 2019

John 16 IRVKan

Show IRVKan only
Verse × ×
1 "I have told you all this so that you will not fall away. “ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.
2 They will expel you from synagogues; but the hour is coming when whoever kills you will think he offers a service to God. ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
3 They will do this because they have not known the Father or me. ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.
4 But I've told you this so that when their hour comes, you'll remember I told you. I didn't tell you this from the start, because I was with you. ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.
5 "But now I'm going to him who sent me, and none of you asks me, 'Where are you going?' “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.
6 Instead, because I have said these things to you, sorrow has filled your heart. ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.
7 I tell you the truth: my going is for your good. If I don't go, the Helper, the Holy Spirit, won't come to you. But if I go, I will send him to you. ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
8 And when he comes, he will convict the world concerning sin and righteousness and judgment: ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
9 concerning sin, because they do not believe in me; ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ
10 concerning righteousness, because I am going to my Father and you will see me no longer; ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,
11 concerning judgment, because the ruler of this world has been judged. ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
12 "I still have many things to say to you, but you cannot bear them now. “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.
13 But when he, the Spirit of truth, comes, he will guide you into all truth. He won't speak on his own, but will speak whatever he hears, and will tell you what is coming. ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
14 He will glorify me, for he will take what is mine and tell it to you. ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.
15 All my Father has is mine; that's why I said he takes from what is mine and will tell you. ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
16 "Soon you'll no longer see me; then soon again you'll see me." ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.
17 So some of his disciples asked each other, "What does he mean: 'In a little while you will not see me, and then in a little while you will see me,' and, 'Because I am going to the Father'?" ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
18 So they kept saying, "What does he mean, 'a little while'? We don't know what he's talking about." “‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
19 Jesus knew they wanted to ask him, so he said to them, "Are you asking each other what I meant by saying, 'In a little while you will not see me, and then a little while you will see me'? ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?
20 "Truly, truly, I tell you: you will weep and mourn, but the world rejoices. You'll grieve, but your grief will become joy. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.
21 A woman in labor has pain because her hour has come; but once she gives birth, she forgets the anguish, because she is joyful that a person has been born into the world. ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
22 So you also have sorrow now, but I will see you again, and your heart will rejoice, and no one will take your joy from you. ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
23 In that day you will ask me nothing. Truly, truly, I tell you: whatever you ask my Father in my name, he will give you. ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
24 Until now you've asked nothing in my name. Ask, and you will receive, so your joy may be complete. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
25 I've told you these things in figures. The hour is coming when I'll no longer speak in figures, but tell you plainly about my Father. “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.
26 That day you'll ask in my name, and I'm not telling you I'll ask my Father on your behalf; ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
27 for the Father himself loves you, because you've loved me and believed I came from our Father. ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28 I came from my Father and entered the world; again, I leave the world, going to my Father." ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
29 His disciples said, "Now you are speaking plainly and not using any figure of speech! ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.
30 Now we know you know everything and need no one to ask you questions; so we believe you came from our Father." ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
31 Jesus replied, "Do you now believe? ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.
32 "See, the hour is coming—has come—when you'll be scattered, each to his own home, leaving me alone. Yet I'm not alone; my Father is with me. ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.
33 I've told you this so you may have peace in me. In the world you'll face trouble, but take heart—I've overcome the world." ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]