Skip to content
The Believer's Library

Indian Revised Version (IRV) Kannada - 2019

John 17 IRVKan

Show IRVKan only
Verse × ×
1 After saying this, Jesus looked up to heaven and said: "Father, the hour has come. Glorify your Son, so the Son may glorify you, ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
2 since you gave him authority over all people, to give eternal life to all you gave him. ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
3 This is eternal life: that they know you, the only true Father, and Jesus Christ whom you sent. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
4 I glorified you on the earth, having finished the work you gave me to do. ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
5 Father, glorify me now with yourself, with the glory I had with you before the world existed. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
6 I revealed your name to those you gave me from the world. They were yours; you gave them to me, and they have kept your word. “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
7 Now they know that everything you have given me is from you, ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8 for I gave them the words you gave me; they received them, truly knew I came from you, and believed you sent me. ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
9 I pray for them, not for the world, but for those you gave me, since they are yours. ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10 Everything mine is yours, and yours is mine, and I am glorified in them. ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11 I'm no longer in the world, but they are in the world, and I'm coming to you. Holy Father, keep them in your name, the name you gave me, so they may be one as we are. ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12 While with them, I kept them in your name you gave me. I guarded them—none was lost except the son of destruction, so Scripture would be fulfilled. ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
13 Now I come to you, and I say these things in the world so they may have my joy completed in themselves. “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14 I've given them your word; the world hated them, since they're not of the world, just as I'm not of the world. ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15 I don't ask you to remove them from the world, but to guard them from the evil one. ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16 They are not of the world, just as I am not of the world. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17 Make them holy by truth; your word is truth. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18 As you sent me into the world, so I have sent them into the world. ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19 For them I make myself holy, so they too may be made holy in truth. ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
20 I pray not only for these, but also for those who will believe in me through their word. “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21 Father, let them all be one, as you're in me and I in you, so they're in us too, and the world believes you sent me. ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
22 The glory you have given me, I have given them, so they may be one as we are one. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23 I in them and you in me, so they may be made completely one, so the world may know you sent me and loved them as you loved me. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
24 Father, I want those you gave me to be with me where I am, to see my glory, which you gave me because you loved me before the world was made. ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
25 Righteous Father—the world doesn't know you, but I know you, and these know you sent me. ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
26 I have made your name known to them, and will keep making it known, so the love you loved me with may be in them, and I in them." ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]