Skip to content
The Believer's Library

Indian Revised Version (IRV) Kannada - 2019

John 18 IRVKan

Show IRVKan only
Verse × ×
1 After saying these things, Jesus went out with his disciples across the Kidron Valley, where a garden stood; he and his disciples entered it. ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
2 Judas the betrayer knew the place too, since Jesus often gathered there with his disciples. ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
3 So Judas came there with a detachment of soldiers and officers from the chief priests and Pharisees, carrying lanterns, torches, and weapons. ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
4 So Jesus, knowing all that was coming on him, went out and said to them, "Who are you looking for?" ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
5 They answered him, "Jesus of Nazareth." Jesus said, "I AM." Judas, his betrayer, stood with them. ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
6 When Jesus said to them, "I AM," they drew back and fell to the ground. ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
7 So he asked them again, "Who are you looking for?" And they said, "Jesus of Nazareth." ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
8 Jesus answered, "I told you I AM. So if you're looking for me, let these men go." ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
9 This fulfilled Jesus's own word: "I have not lost a single one of those you gave me." ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
10 So Simon Peter drew his sword, struck the high priest's servant, and cut off his right ear—the servant named Malchus. ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
11 So Jesus told Peter, "Sheath your sword. Shouldn't I drink the cup my Father has given me?" ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
12 Then the troops, their commander, and the Jewish officers seized Jesus and tied him up. ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
13 They took him to Annas first, for he was father-in-law to Caiaphas, high priest that year. ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
14 Caiaphas was the one who advised the Jews: better one man die for the people. ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
15 Simon Peter and another disciple followed Jesus. That disciple was known to the high priest, so he entered with Jesus into the high priest's courtyard, ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
16 but Peter stood outside at the door. So the other disciple, known to the high priest, went out, spoke to the servant girl who kept the door, and brought Peter in. ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
17 The servant girl guarding the door said to Peter, "You also are not one of this man's disciples, are you?" He said, "I'm not." ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
18 The servants and officers, feeling the cold, had lit a charcoal fire and stood warming themselves; Peter stood with them, warming himself. ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.
19 The high priest then questioned Jesus about his disciples and his teaching. ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
20 Jesus answered him, "I spoke openly to the world; I always taught in synagogues and in the temple, where all the Jews gather. I said nothing in secret. ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
21 Why ask me? Ask those who heard what I said to them; they know what I said." ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
22 At this, one of the guards nearby slapped Jesus, saying, "Is that how you answer the high priest?" ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
23 Jesus answered him, "If I spoke wrongly, testify about the wrong; but if rightly, why do you strike me?" ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
24 Then Annas sent him, still bound, to Caiaphas the high priest. ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
25 Simon Peter, meanwhile, stood warming himself. They said, "Aren't you also one of his disciples?" He denied it: "I'm not." ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
26 One of the high priest's servants, a relative of the man whose ear Peter cut off, asked, "Didn't I see you with him in the garden?" ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
27 Peter again denied it, and at once a rooster crowed. ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
28 Then they led Jesus from Caiaphas to the governor's headquarters. It was early morning. They themselves didn't enter, so they wouldn't be made unclean but could eat the Passover. ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
29 So Pilate went out to them and said, "What accusation do you bring against this man?" ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
30 They answered him, "If this man weren't doing wrong, we wouldn't have handed him over to you." ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
31 Pilate said, "Take him yourselves and judge him by your own law." The Jews said, "We're not permitted to execute anyone." ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
32 This fulfilled the word Jesus had spoken, showing what kind of death he was about to die. ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.
33 So Pilate went back into the headquarters, summoned Jesus, and asked, "Are you the King of the Jews?" ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
34 Jesus answered, "Are you saying this on your own, or did others tell you about me?" ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
35 Pilate replied, "Am I a Jew? Your own nation and chief priests handed you over to me. What have you done?" ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
36 Jesus answered, "My kingdom isn't from this world. If it were, my servants would fight against my being handed to the Jews. But my kingdom isn't from here." ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
37 Then Pilate said to him, "So you are a king?" Jesus answered, "You say I'm a king. I was born for this, and I came into the world for this—to testify to the truth. Everyone who belongs to the truth hears my voice." ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
38 Pilate asked, "What is truth?" Then he went out to the Jews again and said, "I find nothing wrong in him. ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
39 But you have a custom: I release one man to you at Passover. So do you want me to release the King of the Jews to you?" ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
40 They cried out again, "Not this man, but Barabbas!" Now Barabbas was a robber. ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]