Skip to content
The Believer's Library

Indian Revised Version (IRV) Kannada - 2019

John 19 IRVKan

Show IRVKan only
Verse × ×
1 Then Pilate took Jesus and had him flogged. ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
2 The soldiers wove a crown of thorns, put it on his head, and wrapped a purple robe around him. ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,
3 They kept coming to him, saying, "Hail, King of the Jews!" and slapped his face. ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
4 Pilate went out again and said to them, "Look, I'm bringing him out to you, so you'll know I find no fault in him." ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
5 So Jesus came out wearing the crown of thorns and the purple robe. Pilate told them, "Here is the man!" ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
6 When the chief priests and guards saw him, they shouted, "Crucify him! Crucify him!" Pilate told them, "Take him yourselves and crucify him, since I find no guilt in him." ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
7 The Jews answered him, "We have a law; by that law he must die, because he made himself the Son of God." ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
8 When Pilate heard this, he was even more afraid. ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,
9 He went into headquarters again and asked Jesus, "Where are you from?" But Jesus gave him no answer. ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
10 So Pilate said to him, "You won't speak to me? Don't you know I have authority to release you, and authority to crucify you?" ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
11 Jesus answered him, "You would have no authority over me at all unless it had been given you from above. That is why the one who handed me over to you bears the greater sin." ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.
12 From then on, Pilate tried to release him, but the Jews cried out, "If you release him, you're no friend of Caesar. Anyone who makes himself king opposes Caesar." ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
13 Hearing these words, Pilate brought Jesus out and sat on the judgment seat at a place called Stone Pavement—Gabbatha in Aramaic. ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
14 It was Passover Preparation Day, about noon. He told the Jews, "Here is your King!" ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
15 They yelled, "Take him away! Take him away! Crucify him!" Pilate asked them, "Crucify your king?" The chief priests answered, "We have no king but Caesar." ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
16 So then he handed him over to them to be crucified. So they took Jesus, ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.
17 carrying his own cross, he went out to the place called The Place of a Skull, called Golgotha in Aramaic. ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
18 There they crucified him, with two others, one on each side, Jesus in the middle. ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
19 Pilate also wrote a sign and put it on the cross: Jesus of Nazareth, King of the Jews. ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
20 Many Jews read this sign, since the place Jesus was crucified was near the city; it was written in Aramaic, Latin, and Greek. ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
21 So the Jewish chief priests said to Pilate, "Don't write 'The King of the Jews,' but 'This man said, I am King of the Jews.'" ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.
22 Pilate answered, "What I have written, I have written." ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
23 After crucifying Jesus, the soldiers took his clothes and split them into four shares, one per soldier, and took the tunic too. The tunic was seamless, woven in one piece from top to bottom. ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
24 So they said to each other, "Let's not tear it, but cast lots for who gets it." This was to fulfill the Scripture that says, "They divided my clothes among themselves, and cast lots for my garment." So the soldiers did this. ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
25 His mother, his mother's sister, Mary wife of Clopas, and Mary Magdalene stood near Jesus' cross. ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.
26 Seeing his mother and the disciple he loved standing there, Jesus told her, "Woman, here is your son." ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.
27 Then he said to the disciple, "Here is your mother." From that hour, the disciple took her into his home. ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
28 After this, knowing all was now finished, Jesus said, to fulfill Scripture, "I am thirsty." ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
29 A jar full of sour wine sat there; they soaked a sponge in it, fixed it on a hyssop stalk, and lifted it to his mouth. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
30 Jesus took the sour wine and said, "It is finished." He bowed his head and gave up his spirit. ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
31 Since it was Preparation Day, and they didn't want the bodies remaining on the cross during the Sabbath—that Sabbath was a special day—the Jews asked Pilate to break their legs and remove the bodies. ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
32 So soldiers came and broke the legs of the first man, then the other crucified with him. ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
33 But coming to Jesus, seeing he was already dead, they didn't break his legs. ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
34 But one of the soldiers pierced his side with a spear, and blood and water immediately came out. ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
35 The eyewitness has testified—his testimony is true, and he knows he speaks the truth—so you also may believe. ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
36 For these things happened to fulfill the Scripture: "Not one of his bones will be broken." ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
37 And again another Scripture says, "They will look on the one they have pierced." “ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
38 Afterward, Joseph of Arimathea—a disciple of Jesus, but secretly, for fear of the Jews—asked Pilate to let him remove Jesus' body. Pilate agreed, so he came and removed it. ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
39 Nicodemus, who had first come to Jesus at night, also came, bringing a mixture of myrrh and aloes, about seventy-five pounds. ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40 They took Jesus's body and wrapped it in linen cloths with spices, as is Jewish burial custom. ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
41 Where he was crucified there was a garden, and in the garden a new tomb where no one had yet been laid. ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
42 Because it was the Jewish Preparation day, and the tomb was near, they laid Jesus there. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]