Skip to content
The Believer's Library

Indian Revised Version (IRV) Kannada - 2019

John 2 IRVKan

Show IRVKan only
Verse × ×
1 On the third day, a wedding took place in Cana of Galilee; Jesus's mother was there. ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 Jesus and his disciples were also invited to the wedding. ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
3 When the wine ran out, the mother of Jesus said to him, "They have no wine." ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4 "Woman, why are you bringing me into this?" Jesus replied. "My hour has not yet come." ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5 His mother said to the servants, "Do whatever he tells you." ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6 Six stone water jars stood there, used for Jewish purification, each holding twenty to thirty gallons. ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 Jesus said to them, "Fill the jars with water," so they filled them to the brim. ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 He told them, "Draw some out now, and take it to the head steward." So they did. ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
9 The master of the banquet tasted the water now wine, not knowing its source—though the servants who drew it knew. So he called the bridegroom aside, ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 and said, "Everyone serves the good wine first, then the lesser once guests are drunk. But you've kept the good wine till now." “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
11 Jesus performed this first sign at Cana in Galilee. He revealed his glory, and his disciples believed in him. ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12 After this he went down to Capernaum with his mother, brothers, and disciples, and stayed there a few days. ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13 When the Jewish Passover was near, Jesus went up to Jerusalem. ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14 In the temple courts he found sellers of cattle, sheep, and doves, and others sitting at tables exchanging money. ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15 He made a whip of cords and drove them all out of the temple courts, sheep and cattle alike, poured out the money-changers' coins, and overturned their tables. ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 To the dove sellers he said, "Take these out of here! Don't make my Father's house a marketplace." ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 His disciples remembered that it is written: "Zeal for your house will consume me." ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
18 So the Jews asked, "What sign will you show us for doing these things?" ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 Jesus answered them, "Destroy this temple, and in three days I will raise it up." ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
20 They replied, "This temple took forty-six years to build, and will you raise it in three days?" ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 But the temple he had spoken of was his body. ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 After he rose from the dead, his disciples remembered he had said this, and believed the Scripture and the word Jesus had spoken. ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 While he was in Jerusalem at the Passover, many saw the signs he did and trusted in his name. ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 But Jesus would not entrust himself to them, for he knew all people. ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
25 He didn't need anyone's testimony about people—he knew what was in each one. ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]