Skip to content
The Believer's Library

Indian Revised Version (IRV) Kannada - 2019

John 21 IRVKan

Show IRVKan only
Verse × ×
1 Afterward Jesus showed himself again to the disciples by the Sea of Tiberias—this is how he showed himself. ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 Simon Peter, Thomas called Twin, Nathanael from Cana in Galilee, Zebedee's sons, and two other disciples were together. ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
3 Simon Peter told them, "I'm going fishing." "We'll go with you," they said. So they went out and got into the boat, but caught nothing that night. ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 At daybreak Jesus stood on the shore, yet the disciples didn't know it was Jesus. ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5 Jesus said to them, "Children, do you have any fish?" They answered him, "No." ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6 He told them, "Cast the net on the boat's right side, and you'll find fish." So they cast it, and were no longer able to haul it in for the sheer number of fish. ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7 The disciple Jesus loved told Peter, "It's the Lord!" Hearing it was the Lord, Simon Peter wrapped his coat around him—he'd taken it off to work—and threw himself into the sea. ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 The other disciples came in the boat, dragging the net full of fish, since they were only about one hundred yards from shore. ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9 When they went ashore, they saw a charcoal fire with fish on it, and bread. ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 Jesus said to them, "Bring some of the fish you have just caught." ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 So Simon Peter climbed aboard and dragged the net ashore, full of 153 large fish; despite so many, it didn't tear. ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 Jesus said to them, "Come, eat breakfast." None of the disciples dared ask him, "Who are you?"—they knew it was the Lord. ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 Jesus came, took the bread, and gave it to them, and the fish as well. ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14 This was now the third time Jesus revealed himself to the disciples after being raised from the dead. ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 After they ate breakfast, Jesus asked Simon Peter, "Simon, son of John, do you love me with all your heart, more than these?" He answered, "Yes, Lord, you know I love you as a friend." Jesus told him, "Feed my lambs." ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16 A second time Jesus asked, "Simon son of John, do you love me with all your heart?" He replied, "Yes, Lord, you know I love you as a friend." Jesus said, "Take care of my sheep." ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17 A third time Jesus said to him, "Simon son of John, do you love me as a friend?" Peter was hurt that Jesus asked him a third time, "Do you love me as a friend?" and said, "Lord, you know everything; you know that I love you as a friend." Jesus said to him, "Feed my sheep." ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18 "Truly, truly, I tell you: when you were young, you dressed yourself and went where you wanted; but when you're old, you'll stretch out your hands, and another will dress you and take you where you don't want to go." “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 Jesus said this to show by what kind of death Peter would glorify our Father. Then he told him, "Follow me." ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20 Peter turned and saw the disciple Jesus loved following—the one who leaned back against Jesus at supper and asked, "Lord, who is going to betray you?" ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21 When Peter saw him, he said to Jesus, "Lord, what about this man?" ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 Jesus told him, "If I want him to remain until I come, what's that to you? You follow me." ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 So this word spread among the brothers and sisters that this disciple would not die. Yet Jesus did not tell him he would not die, but, "If I want him to remain until I come, what is that to you?" ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
24 This is the disciple testifying to these things and who wrote them; we know his testimony is true. ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 Jesus did many other things too. If each were written down, I don't think the world itself could hold the books written. ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]