Skip to content
The Believer's Library

Indian Revised Version (IRV) Kannada - 2019

John 3 IRVKan

Show IRVKan only
Verse × ×
1 Now there was a man of the Pharisees named Nicodemus, a ruler of the Jews. ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
2 This man came to Jesus at night and said, "Rabbi, we know you are a teacher who has come from our Father, for no one can do these signs you do unless our Father is with him." ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
3 Jesus answered, "Truly, truly, I tell you: unless someone is born from above, he can't see the kingdom of our Father." ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
4 Nicodemus asked, "How can a man be born when he's old? Can he enter his mother's womb again and be born?" ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
5 Jesus answered, "Truly, truly, I tell you, unless one is born of water and the Holy Spirit, he can't enter our Father's kingdom. ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
6 Born of the flesh is flesh, and born of the Holy Spirit is spirit. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
7 Don't be amazed that I said to you, 'You must be born from above.' ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
8 Wind blows where it wants; you hear its sound but don't know where it comes from or where it goes. So it is with everyone born of the Spirit." ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
9 Nicodemus said to him, "How can these things be?" ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10 Jesus answered him, "Are you the teacher of Israel and yet you do not understand these things? ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11 Truly, truly, I tell you: we speak what we know, we testify to what we've seen, yet you don't accept our testimony. ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 If I told you earthly things and you don't believe, how will you believe if I tell you heavenly things? ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 No one has ascended into heaven except the one who descended from heaven, the Son of Man. ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14 As Moses lifted up the serpent in the wilderness, so the Son of Man must be lifted up, ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
15 that whoever believes in him may have eternal life. ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.
16 For our Father so loved the world that he gave his one and only Son, that whoever believes in him will not perish but have eternal life. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
17 For our Father did not send his Son into the world to condemn the world, but so the world could be saved through him. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
18 Whoever believes in him isn't condemned; whoever doesn't believe is condemned already, for not believing in the name of the one and only Son of our Father. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19 This is the judgment: light has entered the world, and people loved darkness more than light because their deeds were evil. ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20 Everyone who does evil hates the light and won't come to the light, so that his deeds aren't exposed. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21 But whoever does the truth comes to the light, so it may be revealed that his works have been done in our Father." ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22 After this, Jesus and his disciples went into the Judean countryside, where he stayed with them, baptizing. ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23 John also baptized at Aenon near Salim, since water was plentiful there, and people came and were baptized, ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24 for John had not yet been put in prison. ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
25 Now a discussion arose between some of John's disciples and a Jew over purification. ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
26 They came to John and said, "Rabbi, the man with you beyond the Jordan, the one you testified about—he's baptizing, and everyone goes to him." ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
27 John replied, "A person cannot receive even one thing unless it is given him from heaven. ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
28 You yourselves can testify: I said 'I'm not the Christ, but sent ahead of him.' ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
29 The one with the bride is the bridegroom—Jesus. The bridegroom's friend, who stands and hears him, rejoices greatly at the bridegroom's voice. So my joy is now complete. ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
30 He must increase, but I must decrease." ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
31 The one who comes from above is above all. The one from earth belongs to earth and speaks in an earthly way. The one who comes from heaven is above all. ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
32 He bears witness to what he has seen and heard, yet no one receives his testimony. ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33 Whoever receives his testimony confirms that our Father is true. ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
34 The one our Father sent speaks our Father's words, for he gives the Holy Spirit without measure. ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
35 Our Father loves the Son and has given all things into his hand. ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
36 Whoever believes in the Son has eternal life; whoever disobeys the Son won't see life—our Father's wrath remains on him. ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]