Skip to content
The Believer's Library

Indian Revised Version (IRV) Kannada - 2019

John 4 IRVKan

Show IRVKan only
Verse × ×
1 So when Jesus knew the Pharisees heard he was making and baptizing more disciples than John. ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
2 (though Jesus himself was not baptizing, but his disciples were), (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),
3 he left Judea and went back to Galilee. ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.
4 And he had to pass through Samaria. ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
5 So he came to a town of Samaria called Sychar, near the field Jacob gave his son Joseph. ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.
6 Jacob's well was there. Jesus, tired from the trip, sat down at the well—about noon. ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
7 A woman of Samaria came to draw water. Jesus said to her, "Give me a drink." ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.
8 (For his disciples had gone into the town to buy food.). ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.
9 The Samaritan woman said, "You're a Jew; why ask me, a Samaritan woman, for a drink?" (Jews don't associate with Samaritans.). ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
10 Jesus answered her, "If you knew our Father's gift, and who asks you, 'Give me a drink,' you'd have asked him, and he'd have given you living water." ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
11 The woman said to him, "Sir, you have nothing to draw with, and the well is deep. Where then do you get this living water? ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
12 Are you greater than our father Jacob, who gave us the well, drank from it himself, with his sons and livestock?" ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
13 Jesus said to her, "Everyone who drinks of this water will be thirsty again, ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
14 but whoever drinks the water I give him will never thirst again; that water will become in him a spring of water welling up to eternal life." ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
15 The woman said to him, "Sir, give me this water, so I won't get thirsty or come here to draw water." ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
16 Jesus said to her, "Go, call your husband, and come back here." ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
17 The woman answered, "I have no husband." Jesus told her, "You're right to say you have no husband. ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
18 For you've had five husbands, and the man you have now isn't your husband. You've spoken the truth." ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
19 The woman said to him, "Sir, I see that you are a prophet. ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
20 Our fathers worshiped on this mountain, but you say Jerusalem is where people must worship." ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
21 Jesus told her, "Woman, believe me: an hour is coming when you'll worship the Father neither on this mountain nor in Jerusalem. ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
22 You worship what you don't know; we worship what we know—salvation comes from the Jews. ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
23 But a time is coming, and now is, when true worshipers worship the Father in spirit and truth—for the Father seeks such worshipers. ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
24 The Father is spirit, and those who worship him must worship in spirit and truth." ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
25 The woman said to him, "I know Messiah—the one called Christ—is coming. When he comes, he will tell us everything." ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
26 Jesus said to her, "I am he—the one speaking to you." ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
27 Just then his disciples returned, amazed he was talking with a woman. Yet no one said, "What do you want?" or, "Why talk with her?" ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
28 So the woman left her water jar and went back to town and said to the people, ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
29 "Come, see a man who told me everything I ever did. Could this be the Christ?" “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
30 They left the town and were coming to him. ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
31 Meanwhile the disciples were urging him, "Rabbi, eat." ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.
32 But he said to them, "I have food to eat that you know nothing about." ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು
33 So the disciples said to one another, "Has anyone brought him something to eat?" ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
34 Jesus said to them, "My food is doing the will of the one who sent me and finishing his work. ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
35 Don't you say, 'Four months more, then harvest comes'? Look, I tell you: raise your eyes, see the fields—white for harvest. ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
36 Already the harvester earns wages, gathering fruit for eternal life, so that planter and harvester may rejoice together. ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
37 For here the saying holds true: 'One plants and another harvests.' ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
38 I sent you to reap what you didn't work for. Others worked, and you have entered into their labor." ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
39 Many Samaritans from that town believed in him because of the woman's testimony: "He told me everything I ever did." “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
40 When the Samaritans came to him, they asked him to stay with them; he stayed two days. ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
41 And many more believed because of his word. ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,
42 They told the woman, "It is no longer because of what you said that we believe—we've heard for ourselves, and we know this man truly is the Savior of the world." ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
43 After the two days he departed from there for Galilee. ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
44 (For Jesus himself had testified that a prophet has no honor in his own hometown.). ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
45 When he arrived in Galilee, the Galileans welcomed him, having seen all he did in Jerusalem at the feast—they too had gone to the feast. ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46 He went again to Cana in Galilee, where he had turned water to wine. A royal official's son was sick at Capernaum. ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47 Hearing that Jesus had come from Judea to Galilee, he went to him and begged him to come down and heal his son, who was about to die. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48 So Jesus said to him, "Unless you people see signs and wonders, you will never believe." ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49 The royal official said to him, "Sir, come down before my child dies." ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
50 Jesus said to him, "Go; your son will live." The man believed what Jesus told him and left. ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
51 As he was going down, his servants met him and told him that his boy was living. ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
52 So he asked them the hour he improved, and they said, "Yesterday at the seventh hour, the fever left him." ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
53 So the father knew this was the hour when Jesus told him, "Your son will live." He and his whole household believed. ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
54 This was now the second sign that Jesus did when he had come from Judea to Galilee. ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]