1After this, Jesus crossed the Sea of Galilee, also called the Sea of Tiberias.IRVKanತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
2A large crowd followed him, because they saw the signs he performed on the sick.IRVKanಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
3Jesus went up on the mountainside and sat down there with his disciples.IRVKanಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
4Now the Passover, the feast of the Jews, was near.IRVKanಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
5Looking up, Jesus saw a large crowd approaching and asked Philip, "Where can we buy bread for these people to eat?"IRVKanಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
6He said this to test Philip, for he himself already knew what he was going to do.IRVKanತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
7Philip answered him, "200 days' wages of bread isn't enough for each of them to get a little."IRVKanಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
8One of his disciples, Andrew, Simon Peter's brother, said to him,IRVKanಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
9"A boy here has five barley loaves and two fish—but what's that for so many?"IRVKan“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10Jesus said, "Have the people sit down." Much grass grew there, so about 5,000 men sat down.IRVKanಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11Jesus then took the loaves, gave thanks, and distributed them to those seated; likewise with the fish, as much as they wanted.IRVKanಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12When they were full, he told his disciples, "Gather the leftover pieces, so nothing is lost."IRVKanಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
13So they gathered the fragments left over from the five barley loaves after the people ate, filling twelve baskets.IRVKanಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
14So when the people saw the sign he did, they said, "This really is the Prophet coming into the world!"IRVKanಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
15Knowing they meant to come and seize him to make him king, Jesus withdrew again to the mountain alone.IRVKanಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
16When evening came, his disciples went down to the sea,IRVKanಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
17got in a boat and headed across the sea to Capernaum. It was already dark, and Jesus had not yet reached them.IRVKanದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18A strong wind was blowing, and the sea grew rough.IRVKanಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
19After rowing three or four miles, they saw Jesus walking on the water, approaching the boat, and were afraid.IRVKanಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
20But he said to them, "It is I; do not be afraid."IRVKanಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
21So they were glad to take him into the boat, and instantly it reached the shore they were heading toward.IRVKanಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
22The next day, the crowd remaining on the far shore saw that only one boat had been there, that Jesus had not boarded it with his disciples, but that his disciples had gone off alone.IRVKanಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
23Other boats came from Tiberias near the place where they ate bread after the Lord gave thanks.IRVKanಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24So when the crowd saw Jesus and his disciples weren't there, they got in boats and went to Capernaum to look for Jesus.IRVKanಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25Finding him across the sea, they asked, "Rabbi, when did you get here?"IRVKanಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
26Jesus answered them, "Truly, truly, I tell you: you seek me not because you saw signs, but because you ate the loaves and were filled.IRVKanಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
27Don't work for food that spoils, but for food that lasts to eternal life, which the Son of Man will give you. For on him our Father has set his seal."IRVKanನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.
28Then they said to him, "What must we do to be doing the works of our Father?"IRVKanಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
29Jesus answered them, "This is our Father's work: that you believe in the one he sent."IRVKanಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
30So they asked him, "What sign will you give, so we may see and believe you? What work will you do?IRVKanಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
31Our ancestors ate manna in the wilderness, as it is written: 'He gave them bread from heaven to eat.'"IRVKanನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
32Jesus told them, "Truly, truly, I tell you: Moses didn't give you the bread from heaven—my Father gives you the true bread from heaven.IRVKanಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
33For the bread of our Father is he who comes down from heaven and gives the world life."IRVKanದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
34So they said to him, "Lord, give us this bread always."IRVKanಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
35Jesus told them, "I am the bread of life. Whoever comes to me will never hunger; whoever believes in me will never thirst.IRVKanಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.
36But as I told you, you have seen me and still do not believe.IRVKanಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
37All the Father gives me will come to me, and the one who comes to me I will never drive away.IRVKanತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
38For I came down from heaven not to do my own will, but the will of him who sent me.IRVKanನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
39This is the will of him who sent me: that I lose none of all he has given me, but raise them up on the last day.IRVKanನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
40For this is the will of my Father: that everyone who looks to the Son and believes in him should have eternal life, and I will raise them up on the last day."IRVKanಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
41So the Jews grumbled about him because he said, "I am the bread that came down from heaven."IRVKanಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
42They said, "Isn't this Jesus, Joseph's son, whose father and mother we know? How can he now say, 'I have come down from heaven'?"IRVKan“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
43Jesus answered them, "Stop grumbling among yourselves.IRVKanಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.
44"No one can come to me unless the Father who sent me draws him, and I will raise him on the last day.IRVKan“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
45It is written in the Prophets: 'And they will all be taught by our Father.' Everyone who has heard and learned from the Father comes to me.IRVKan‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
46Not that anyone has seen the Father except the one from him; he has seen the Father.IRVKanದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
47Truly, truly, I tell you, whoever believes has eternal life.IRVKanನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.
48I am the bread of life.IRVKanನಾನೇ ಜೀವದ ರೊಟ್ಟಿ
49Your ancestors ate the manna in the wilderness, yet they died.IRVKanನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
50This is the bread that comes down from heaven, so anyone may eat it and not die.IRVKanಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
51I am the living bread come down from heaven. Whoever eats this bread will live forever. The bread I will give is my flesh, for the life of the world."IRVKanನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.
52Then the Jews argued sharply among themselves, "How can this man give us his flesh to eat?"IRVKanಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
53Jesus told them, "Truly, truly, I tell you, unless you eat the flesh of the Son of Man and drink his blood, you have no life in yourselves.IRVKanಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
54Whoever feeds on my flesh and drinks my blood has eternal life, and I will raise him on the last day.IRVKanಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
55For my flesh is true food, and my blood is true drink.IRVKanಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
56Whoever feeds on my flesh and drinks my blood remains in me, and I in him.IRVKanಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
57As the living Father sent me and I live because of the Father, so whoever feeds on me will live because of me.IRVKanಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
58This is the bread that came down from heaven. It is not like the bread your ancestors ate and still died. Whoever feeds on this bread will live forever."IRVKanಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.
59He said these things while teaching in the synagogue at Capernaum.IRVKanಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
60On hearing it, many of his disciples said, "This is a hard teaching. Who can accept it?"IRVKanಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
61Aware that his disciples were grumbling about this, Jesus said to them, "Does this offend you?IRVKanತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
62"Then what if you see the Son of Man ascending to where he was before?IRVKanಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63The Spirit gives life; the flesh helps nothing. The words I have spoken to you are spirit and life.IRVKanಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
64But some of you don't believe." For Jesus knew from the start who didn't believe, and who would betray him.IRVKanಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
65And he said, "This is why I told you: no one can come to me unless the Father enables him."IRVKanಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
66From this time many of his disciples turned back and no longer walked with him.IRVKanಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
67So Jesus asked the Twelve, "Do you want to leave too?"IRVKanಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
68Simon Peter answered him, "Lord, to whom should we go? You have the words of eternal life.IRVKanಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
69We have believed and known you are the Holy One of our Father."IRVKanನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
70Jesus answered them, "Have I not chosen you, the Twelve? Yet one of you is a devil."IRVKanಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
71He meant Judas, son of Simon Iscariot, one of the Twelve, who was about to betray him.IRVKanಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app. Indian Revised Version (IRV) Kannada - 2019 · Creative Commons - Attribution-ShareAlike [CC BY-SA]