Skip to content
The Believer's Library

Indian Revised Version (IRV) Kannada - 2019

John 7 IRVKan

Show IRVKan only
Verse × ×
1 After this, Jesus traveled around Galilee, not wanting to go into Judea because Jewish leaders there were looking for a chance to kill him. ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
2 But the Jewish Festival of Booths was near. ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
3 His brothers told him, "Leave here and go to Judea, so your disciples can also see the works you do. ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
4 No one seeking public attention hides what he does. If you're doing these things, show yourself to the world." ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
5 For not even his brothers believed in him. ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
6 So Jesus told them, "My time has not yet come, but for you any time is right. ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7 "The world cannot hate you, but it hates me, because I testify that its works are evil. ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
8 You yourselves go up to the festival; I'm not going up to this festival, since my time hasn't yet fully come." ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
9 After saying this, he stayed in Galilee. ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
10 After his brothers went up to the festival, he too went up—not openly, but secretly. ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
11 So the Jewish leaders were looking for him at the festival and asking, "Where is he?" ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
12 Much murmuring about him spread among the crowds: some said, "He's good," others, "No, he misleads the crowd." ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
13 Yet no one spoke about him openly, for fear of the Jewish leaders. ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
14 About the middle of the festival, Jesus went up into the temple and began to teach. ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
15 The Jewish leaders were amazed and asked, "How does this man know so much without training?" ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
16 Jesus answered them, "My teaching isn't mine—it's from the one who sent me. ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
17 Whoever wants to do our Father's will knows if my teaching is from my Father or I speak on my own. ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
18 Whoever speaks on his own seeks his own glory, but whoever seeks the sender's glory is true, with no falsehood in him. ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
19 Didn't Moses give you the law? Yet none of you obeys the law. Why are you trying to kill me?" ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
20 The crowd answered, "You have a demon! Who is trying to kill you?" ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
21 Jesus replied, "I did one work, and you are all amazed. ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
22 "Moses gave you circumcision—not from Moses, but the patriarchs—and you circumcise a man on the Sabbath. ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
23 If a man is circumcised on the Sabbath so the law of Moses isn't broken, why are you angry at me for making a whole man well on the Sabbath? ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
24 Stop judging by appearances, and judge with right judgment." ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.
25 Then some Jerusalemites said, "Isn't this the man they want to kill? ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
26 Yet he speaks openly, and they say nothing to him. Can the rulers truly know this is the Christ? ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
27 But we know this man's origin. When the Christ comes, no one will know his origin." ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
28 Then Jesus, teaching in the temple, cried out: "You know me, and know where I'm from. Yet I didn't come on my own—the one who sent me is true, and you don't know him. ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
29 I know him, because I am from him, and he sent me." ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
30 So they tried to grab him, but no one touched him, because his hour had not yet come. ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
31 But many in the crowd believed in him, asking, "When the Christ comes, will he do more signs than this man did?" ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
32 The Pharisees heard the crowd murmuring these things about him, so the chief priests and Pharisees sent temple guards to seize him. ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
33 So Jesus said, "I'm with you a little while longer, and then I go to the one who sent me. ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
34 You will search for me and not find me; you cannot come where I am." ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
35 So the Jewish leaders asked each other, "Where does he intend to go that we won't find him? Does he intend to go to our people dispersed among the Greeks and teach the Greeks? ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
36 What does he mean: 'You will look for me, but you will not find me,' and 'Where I am, you cannot come'?" ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37 On the last, great day of the festival, Jesus stood and called out, "Whoever is thirsty, let him come to me and drink. ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38 Whoever believes in me, as Scripture said, rivers of living water will flow from his heart." ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
39 He said this about the Holy Spirit, whom believers in him were to receive; the Spirit had not yet been given, since Jesus had not yet been glorified. ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
40 When they heard these words, some of the crowd said, "This really is the Prophet." ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
41 Others said, "This is the Christ." But others asked, "How can the Christ come from Galilee? ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
42 Doesn't Scripture say the Christ comes from David's line and from Bethlehem, David's village?" ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
43 So the crowd was divided over him. ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
44 Some of them wanted to seize him, but no one laid a hand on him. ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
45 So the temple guards returned to the chief priests and Pharisees, who asked, "Why didn't you bring him?" ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
46 The guards answered, "No one ever spoke the way this man does." ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
47 "Have you also been deceived?" the Pharisees answered. ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
48 "Has any of the rulers or of the Pharisees believed in him? ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
49 But this crowd, who knows nothing of the law—they are under a curse." ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
50 Nicodemus, who had gone to Jesus earlier and was one of their own number, asked them, ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,
51 "Does our law condemn a man without first hearing him and finding out what he does?" ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
52 They replied, "Are you from Galilee too? Search, and see: no prophet arises from Galilee." ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
53 Then they all went home. ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]