Skip to content
The Believer's Library

Indian Revised Version (IRV) Kannada - 2019

John 8 IRVKan

Show IRVKan only
Verse × ×
1 But Jesus went to the Mount of Olives. ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು.
2 At dawn he came again to the temple; all the people came to him, and he sat down and taught them. ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
3 The scribes and Pharisees brought a woman caught in adultery and stood her in the middle. ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;
4 They said to him, "Teacher, this woman was caught in the act of adultery. ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.
5 Now in the Law, Moses commanded us to stone such women. So what do you say? ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.
6 They said this to test him, seeking grounds to accuse him. But Jesus bent down and wrote on the ground with his finger." ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
7 When they kept questioning him, he stood up and said to them, "Whichever of you has no sin, cast the first stone at her." ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು
8 And once more he bent down and wrote on the ground. ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
9 Hearing this, they left one by one, starting with the oldest, until Jesus was left alone with the woman standing there. ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
10 Jesus stood up and said to her, "Woman, where are they? Has no one condemned you?" ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು.
11 She said, "No one, Lord." Jesus said, "I don't condemn you either. Go, and from now on, don't sin anymore." ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.
12 Jesus spoke to them again: "I am the world's light. Whoever follows me will never walk in darkness but will have the light of life." ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.
13 So the Pharisees said to him, "You are bearing witness about yourself; your testimony is not true." ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು
14 Jesus replied, "Even if I testify about myself, my testimony is true, because I know where I came from and where I'm going; but you don't know where I come from or where I'm going. ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.
15 You judge according to the flesh; I judge no one. ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
16 Even if I judge, my judgment is true, since I do not judge alone, but I and the Father who sent me. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.
17 In your Law it is written that the testimony of two people is true. ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.
18 I testify about myself, and the Father who sent me testifies about me." ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.
19 They asked, "Where is your Father?" Jesus answered, "You know neither me nor my Father. If you knew me, you would know my Father also." ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.
20 He said this while teaching in the temple, in the treasury; no one seized him—his hour had not yet come. ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
21 So he told them again, "I am going away. You will look for me and die in your sin. Where I am going, you cannot come." ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.
22 So the Jews said, "Will he kill himself, since he says, "You can't come where I'm going"?" ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.
23 He said to them, "You're from below; I'm from above. You're of this world; I'm not of this world. ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.
24 I told you that you'll die in your sins; if you don't believe I AM, you'll die in your sins." ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
25 So they said to him, "Just who are you?" Jesus said to them, "Exactly what I've said from the start. ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.
26 I have much to say and judge about you, but the One who sent me is true; what I heard from him, I tell the world." ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.
27 They did not understand that he had been speaking to them about the Father. ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
28 So Jesus told them, "When you lift up the Son of Man, then you'll know that I AM, and that I do nothing on my own, but say these things as the Father taught me. ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
29 The one who sent me is with me; he hasn't left me alone, because I always do what pleases him." ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
30 As he was saying these things, many believed in him. ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
31 Jesus then told the Jews who had believed him, "If you remain in my word, you are truly my disciples, ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.
32 and you will know the truth, and the truth will set you free." ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.
33 They answered him, "We are Abraham's descendants, never enslaved to anyone. How can you say, 'You will become free'?" ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.
34 Jesus answered them, "Truly, truly, I tell you: everyone who keeps sinning is sin's slave. ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
35 The slave does not remain in the house forever; the son remains forever. ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.
36 So if the Son sets you free, you will be free indeed. ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
37 I know you are Abraham's descendants; yet you seek to kill me because my word has no space in you. ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.
38 I speak what I've seen with my Father, and you do what you heard from your father." ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.
39 They answered, "Abraham is our father." Jesus said, "If you were Abraham's children, you'd do the works Abraham did, ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.
40 but now you want to kill me—a man who told you the truth I heard from my Father. Abraham didn't do this. ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.
41 You do your father's works." They said to him, "We weren't born of sexual sin. We have one Father—God himself." ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.
42 Jesus said to them, "If God were your Father, you'd love me, for I came from God and am here. I didn't come on my own—he sent me. ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.
43 Why don't you understand my speech? Because you cannot bear to hear my word. ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.
44 You belong to your father, the devil, and want to carry out his desires. He was a murderer from the beginning, not standing in truth, since no truth is in him. When he lies, he speaks from his own nature, since he's a liar and the lie's father. ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.
45 But because I tell the truth, you do not believe me. ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.
46 Who among you convicts me of sin? If I speak truth, why don't you believe me? ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?
47 Whoever is from our Father hears his words; you don't hear because you're not from our Father." ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
48 The Jews replied, "Aren't we right in saying that you are a Samaritan and have a demon?" ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
49 Jesus answered, "I do not have a demon, but I honor my Father, and you dishonor me. ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.
50 But I'm not seeking my own glory; our Father seeks it, and he judges. ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.
51 Truly, truly, I say to you, if anyone keeps my word, he will never see death." ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
52 The Jews said to him, "Now we know you have a demon. Abraham died, as did the prophets, yet you say, 'Whoever keeps my word will never taste death.' ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
53 Are you greater than our father Abraham, who died? The prophets died too! Who do you claim to be?" ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.
54 Jesus answered, "If I glorify myself, my glory is nothing. It is my Father who glorifies me, of whom you say, 'He is our God.' ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,
55 You don't know him, but I know him. If I said I didn't know him, I'd be a liar like you. But I know him and keep his word. ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.
56 Your father Abraham rejoiced that he would see my day. He saw it and was glad." ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.
57 So the Jews said to him, "You're not yet fifty years old, and you've seen Abraham?" ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು.
58 Jesus said to them, "Truly, truly, I say to you, before Abraham was, I AM." ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
59 So they grabbed stones to throw at him, but Jesus hid himself and slipped out of the temple. ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]