Skip to content
The Believer's Library

Indian Revised Version (IRV) Kannada - 2019

John 9 IRVKan

Show IRVKan only
Verse × ×
1 As Jesus passed by, he saw a man who had been blind from birth. ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2 His disciples asked him, "Rabbi, who sinned, this man or his parents, that he was born blind?" ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
3 "Neither this man nor his parents sinned,' Jesus answered, 'but this happened so the works of our Father might be revealed in him. ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
4 We must do the works of the one who sent me while it is day; night comes, when no one can work. ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
5 As long as I am in the world, I am the light of the world.'" ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
6 Saying this, he spat on the ground, made mud from the saliva, and smeared it on the man's eyes. ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
7 He told him, "Go, wash in the pool of Siloam" (meaning Sent). So the man went, washed, and returned able to see. ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8 Neighbors and those who'd seen him begging before said, "Isn't this the one who used to sit and beg?" ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
9 Some said, "That's him." Others said, "No, he just looks like him." He kept saying, "I'm the one." ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
10 So they asked him, "Then how were your eyes opened?" ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
11 He replied, "The man called Jesus made mud, smeared it on my eyes, and told me, 'Go to Siloam and wash.' So I went, washed, and could see." ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12 They said to him, "Where is he?" He said, "I do not know." ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
13 They brought the man who had been blind to the Pharisees. ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14 Now it was a Sabbath day when Jesus made the mud and opened his eyes. ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
15 So the Pharisees also asked him again how he had gained sight. He told them, "He put mud on my eyes, and I washed, and I see." ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16 Some Pharisees said, "This man isn't from God—he doesn't keep the Sabbath." Others said, "How can a sinful man do such signs?" So they were divided among them. ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17 Again they asked the blind man, "What do you say about him, since he opened your eyes?" He said, "He is a prophet." ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18 The Jews did not believe he had been blind and gained sight, until they summoned the parents of the man who had gained sight. ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19 They asked them, "Is this your son you say was born blind? How then does he now see?" ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20 His parents answered, "We know that this is our son and that he was born blind. ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
21 But how he now sees, we don't know; or who opened his eyes, we don't know. Ask him—he's an adult; he'll speak for himself." ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
22 His parents said this, fearing the Jews, since the Jews had already agreed that if anyone confessed Jesus as the Christ, he would be expelled from the synagogue. ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
23 That was why his parents said, "He is of age; ask him." “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
24 So they called the once-blind man again and said, "Give God the glory. We know this man is a sinner." ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
25 He replied, "Whether he's a sinner, I don't know. I know one thing: I was blind, now I see." ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
26 They said to him, "What did he do to you? How did he open your eyes?" ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
27 He answered them, "I already told you, and you didn't listen. Why do you want to hear it again? Do you also want to become his disciples?" ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
28 And they reviled him, saying, "You are his disciple, but we are disciples of Moses. ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
29 We know God spoke to Moses, but we don't know where this man is from." ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
30 The man answered them, "Here's the amazing thing: you don't know where he's from, yet he opened my eyes. ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
31 We know God doesn't listen to sinners, but if anyone reveres God and does his will, God listens to him. ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32 Never since the world began has anyone heard of someone opening the eyes of a person born blind. ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
33 If this man were not from God, he could do nothing." ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
34 They answered him, "You were born entirely in sin, yet you teach us?" and threw him out. ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 Jesus heard they had thrown him out, and finding him, said, "Do you believe in the Son of Man?" ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36 He answered, "And who is he, sir, so I can believe in him?" ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37 Jesus said to him, "You have seen him, and it is he who is speaking with you." ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
38 He said, "Lord, I believe," and he worshiped him. ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
39 Jesus said, "I came into this world for judgment, so those who don't see may see, and those who see may become blind." ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
40 Some Pharisees with him heard this and said, "Are we blind too?" ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
41 Jesus told them, "If you were blind, you would have no sin; but since you say, 'We see,' your sin remains." ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]