Skip to content
The Believer's Library

Indian Revised Version (IRV) Kannada - 2019

Jonah 1 IRVKan

Show IRVKan only
Verse × ×
1 Now the word of our Father came to Jonah son of Amittai: ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,
2 "Get up, go to Nineveh, that great city, and cry out against it, for their evil has risen before me." “ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
3 But Jonah set out to flee to Tarshish, away from our Father's presence. He went down to Joppa, found a ship bound for Tarshish, paid its fare, and boarded to go with them to Tarshish, away from our Father's presence. ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
4 Then our Father hurled a great wind at the sea; a violent storm arose, and the ship seemed about to break apart. ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
5 The sailors were terrified, each crying to his own god. They threw the ship's cargo into the sea to lighten it. But Jonah had gone below deck, where he lay fast asleep. ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
6 The captain came and said, "How can you sleep? Get up, call on your god! Maybe he will notice us, and we won't perish." ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
7 The men said to each other, "Come, let's cast lots to find who's to blame for this disaster on us." They cast lots, and it fell on Jonah. ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.
8 They said to him, "Tell us—you who have brought this disaster on us—what do you do? Where do you come from? What is your country? What people are you from?" ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು
9 He answered, "I am a Hebrew, and I fear our Father, the Father of heaven, who made the sea and the dry land." ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,
10 Then the men were terrified and said, "What have you done?" For they knew he was fleeing from our Father's presence, because he had told them. ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.
11 Then they said to him, "What should we do to you to calm the sea for us?"—for the sea grew stormier and stormier. ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.
12 He told them, "Lift me up and throw me into the sea, and it will calm for you. I know this great storm came on you because of me." ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.
13 Instead the men rowed hard to reach land, but could not, for the sea grew wilder and wilder against them. ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
14 So they cried out to our Father: "Please, God, don't let us die for taking this man's life. Don't hold us guilty of innocent blood, for you have done as you pleased." ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
15 Then they picked Jonah up and hurled him into the sea, and the raging sea grew calm. ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.
16 The men then feared our Father greatly, offered a sacrifice to our Father, and made vows. ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
17 Now our Father appointed a great fish to swallow Jonah, and Jonah was in the belly of the fish three days and three nights. ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]