Skip to content
The Believer's Library

Indian Revised Version (IRV) Kannada - 2019

Jonah 3 IRVKan

Show IRVKan only
Verse × ×
1 Then the word of our Father came to Jonah a second time: ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
2 "Get up, go to Nineveh, that great city, and proclaim the message I give you." ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.
3 So Jonah got up and went to Nineveh, as our Father had said. Nineveh was a huge city—three days to cross. ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
4 Jonah walked one day into the city and cried out, "Forty more days and Nineveh is overturned!" ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
5 The people of Nineveh believed God. They called a fast and put on sackcloth, from the greatest to the least. ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
6 When the news reached Nineveh's king, he rose from his throne, removed his robe, covered himself with sackcloth, and sat in ashes. ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
7 He had this proclaimed in Nineveh, by decree of the king and his nobles: No person or animal, herd or flock, may taste anything; they must not graze or drink water. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
8 Let people and animals be covered with sackcloth, and everyone cry out to God with all their strength. Let each turn from his evil way and the violence in his hands. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
9 Who knows? God may turn and change his mind, turn from his fierce anger, so we're not destroyed. ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
10 When God saw their deeds—that they turned from their evil way—God changed his mind about the disaster he had threatened to bring on them, and did not do it. ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]