Skip to content
The Believer's Library

Indian Revised Version (IRV) Kannada - 2019

Leviticus 1 IRVKan

Show IRVKan only
Verse × ×
1 Our Father called to Moses and spoke to him from the tent of meeting, saying: ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
2 "Speak to the Israelites and say to them: When any of you brings me an offering, bring your offering of livestock from the herd or the flock. “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
3 "If his offering is a burnt offering from the herd, he is to offer a male without defect, offering it at the entrance of the tent of meeting, to be accepted before me. “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
4 He is to lay his hand on the burnt offering's head, and it will be accepted for him, to atone for him. ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
5 He is to kill the young bull before me, and Aaron's sons the priests are to bring the blood and splash it around the altar at the entrance of the tent of meeting. “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
6 Then he is to skin the burnt offering and cut it into its pieces. ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
7 Aaron's sons the priests will lay a fire on the altar and arrange wood on it. ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
8 Aaron's sons, the priests, arrange the pieces, head, and fat on the wood over the fire on the altar. ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
9 He is to wash its inner organs and legs with water; the priest burns it all on the altar—a burnt offering, a food offering, a pleasing aroma to me. ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
10 "If his burnt offering is from the flock—sheep or goats—he must bring a male without defect. “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
11 He is to slaughter it on the altar's north side before me; Aaron's sons the priests are to splash its blood around the altar. ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
12 He is to cut it into pieces—head and fat—and the priest is to arrange them on the wood, on the fire, on the altar. ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
13 He must wash the inner organs and legs with water; the priest offers it all, burns it on the altar—a burnt offering, a food offering, a pleasing aroma to me. ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
14 "If his burnt offering to me is a bird, he must bring turtledoves or young pigeons as his offering. “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
15 The priest brings it to the altar, wrings off its head, burns it there; its blood drains against the altar's side. ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
16 He removes its crop with its contents, throwing it beside the altar eastward, at the ash heap. ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
17 He is to tear it open by the wings, not fully apart; the priest will burn it on the altar's wood over the fire—a burnt offering, a food offering, a pleasing aroma to me." ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]