Skip to content
The Believer's Library

Indian Revised Version (IRV) Kannada - 2019

Leviticus 3 IRVKan

Show IRVKan only
Verse × ×
1 "If someone's offering is a peace offering from the herd, male or female, he must present it without defect before me. “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
2 He lays his hand on his offering's head and slaughters it at the tent of meeting's entrance, and Aaron's sons the priests splash the blood against all sides of the altar. ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
3 From the peace offering he must present to me a food offering made by fire: the fat covering the inner parts and all the fat on them, ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
4 both kidneys with the fat on them near the flanks, and the long lobe of the liver, which he removes with the kidneys. ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
5 Aaron's sons will burn it on the altar atop the burnt offering on the wood over the fire—a food offering, a pleasing aroma to me. ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
6 "If his peace offering to me is from the flock, male or female, he must present it without defect. “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
7 If he brings a lamb as his offering, he is to present it before me, ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
8 lay his hand on the head of his offering and slaughter it before the tent of meeting; Aaron's sons will splash its blood on all sides of the altar. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
9 From the peace offering he must present a food offering to me by fire: its fat, the whole fat tail cut off close to the backbone, the fat covering the inner parts, and all the fat on them, ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
10 both kidneys with the fat near the loins, and the liver's long lobe, which he removes with the kidneys. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
11 The priest will burn it on the altar as food, an offering made to me by fire. ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
12 "If his offering is a goat, he is to present it before me, “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
13 lay his hand on its head and slaughter it in front of the tent of meeting; Aaron's sons will splash its blood on all sides of the altar. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
14 From it he must present a food offering to me by fire: the fat covering the inner parts and all the fat on them, ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
15 both kidneys with their fat near the loins, and the liver's long lobe, which he removes with the kidneys. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
16 The priest will burn them on the altar as food, an offering by fire, a pleasing aroma. All fat is mine. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
17 "This is a lasting rule for all generations, wherever you live: never eat any fat or any blood." ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]