Skip to content
The Believer's Library

Indian Revised Version (IRV) Kannada - 2019

Mark 1 IRVKan

Show IRVKan only
Verse × ×
1 The beginning of the gospel of Jesus Christ, the Son of our Father. ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
2 As written in Isaiah the prophet: "Look, I send my messenger ahead of you, who will prepare your way. ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 A voice calling out in the wilderness: 'Prepare the way of the Lord, make his paths straight.'" “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
4 John appeared, baptizing in the wilderness and proclaiming a baptism of repentance for the forgiveness of sins. ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
5 All Judea and everyone in Jerusalem went out to him, and he baptized them in the Jordan River as they confessed their sins. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
6 John was dressed in camel's hair, with a leather belt around his waist, eating locusts and wild honey. ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
7 He announced: "After me comes one stronger than I; I'm not worthy to stoop and untie his sandal strap. ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
8 I have baptized you with water, but he will baptize you with the Holy Spirit." ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
9 In those days Jesus came from Nazareth of Galilee and was baptized by John in the Jordan. ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
10 Immediately, as he came up out of the water, he saw the heavens split open and the Holy Spirit come down on him like a dove. ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
11 And a voice came from heaven: "You are my beloved Son; in you I delight." ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
12 And immediately the Holy Spirit drove him out into the wilderness. ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
13 He was in the wilderness forty days, tempted by Satan, with the wild animals, and the angels served him. ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
14 Now after John was arrested, Jesus came into Galilee, proclaiming the gospel of our Father, ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
15 and saying, "The time is fulfilled, and our Father's kingdom is near; repent and believe the good news." “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
16 Passing the Sea of Galilee, he saw Simon and his brother Andrew casting a net in the sea, for they were fishermen. ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
17 And Jesus said to them, "Follow me, and I will make you become fishers of people." ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
18 And immediately they left their nets and followed him. ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
19 Going a little farther, he saw James son of Zebedee and John his brother in their boat, mending the nets. ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 At once he called them; leaving their father Zebedee in the boat with the hired hands, they followed him. ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
21 They went to Capernaum. At once, on the Sabbath, he entered the synagogue and began teaching. ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
22 They were amazed at his teaching, for he taught them with authority, not like the scribes. ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
23 And immediately there was in their synagogue a man with an unclean spirit, and he cried out. ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
24 Why meddle with us, Jesus of Nazareth? Have you come to destroy us? I know who you are—God's Holy One! ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
25 But Jesus rebuked him, saying, "Be silent, and come out of him!" ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
26 And the unclean spirit, convulsing him and crying out with a loud voice, came out of him. ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
27 All were amazed, and they questioned each other: "What is this? A new teaching with authority - he commands even the unclean spirits, and they obey him!" ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
28 And at once his fame spread everywhere throughout all the surrounding region of Galilee. ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
29 Immediately he left the synagogue and went to Simon and Andrew's house, with James and John. ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
30 Now Simon's mother-in-law lay sick with a fever, and immediately they told him about her. ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31 He came, took her hand, raised her up. The fever left her, and she served them. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
32 That evening, when the sun set, they brought him all who were sick and those oppressed by demons. ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33 And the whole city was gathered together at the door. ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
34 He healed many sick with various diseases and drove out many demons, not letting the demons speak, since they knew him. ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
35 Long before dawn, while still dark, he got up, went out to a deserted place, and prayed there. ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
36 And Simon and those who were with him searched for him, ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
37 and they found him and said to him, "Everyone is looking for you." ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
38 He said, "Let us go elsewhere, to the neighboring towns, so I can preach there too, for that is why I came." ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
39 And he went throughout all Galilee, preaching in their synagogues and casting out demons. ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
40 A man with leprosy came, knelt, and begged him, "If you're willing, you can make me clean." ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
41 Moved with deep compassion, he stretched out his hand, touched him, and said to him, "I am willing; be clean." ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
42 And immediately the leprosy left him, and he was made clean. ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
43 Sternly warning him, he sent him away at once, ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
44 and told him, "Make sure you tell no one—but go, show yourself to the priest, and offer what Moses commanded for your cleansing, as proof to the people." ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
45 But he went out, proclaiming it freely and spreading the news, so Jesus could no longer enter a town openly, but stayed in lonely places. Yet people came to him from everywhere. ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]