Skip to content
The Believer's Library

Indian Revised Version (IRV) Kannada - 2019

Mark 10 IRVKan

Show IRVKan only
Verse × ×
1 He left there for the region of Judea and beyond the Jordan; crowds gathered to him again, and as usual he taught them once more. ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
2 Some Pharisees came to test him, asking, "Is it lawful for a man to divorce his wife?" ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
3 He answered them, "What did Moses command you?" ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.
4 They said, "Moses permitted a man to write a certificate of divorce and send her away." ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
5 Jesus told them, "He wrote you this command because your hearts were hard. ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.
6 But from the beginning of creation, our Father made them male and female. ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.
7 'For this reason a man will leave his father and mother and be joined to his wife, ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
8 and the two will become one flesh.' So they are no longer two, but one flesh. ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
9 Therefore what our Father has joined together, let no one separate." ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.
10 Back in the house, the disciples asked him about this again. ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
11 He said to them, "Whoever divorces his wife and marries another commits adultery against her, ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
12 and if she divorces her husband and marries another, she commits adultery." ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
13 People were bringing children to him so that he might touch them, but the disciples rebuked them. ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
14 When Jesus saw this, he grew angry and said, "Let the children come to me; don't stop them, for the kingdom of our Father belongs to such as these. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
15 Truly I tell you, whoever doesn't receive our Father's kingdom like a child will never enter it." ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
16 And he took them in his arms and blessed them, laying his hands on them. ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
17 As he started down the road, a man ran up, knelt before him, and asked, "Good Teacher, what must I do to inherit eternal life?" ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
18 Jesus asked, "Why call me good? No one is good except our Father alone. ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.
19 You know the commandments: 'don't murder, commit adultery, steal, or give false testimony; don't defraud; honor your father and mother.'" ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
20 He said to him, "Teacher, all these I have kept since my youth." ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
21 Jesus looked at him and loved him. "One thing you lack: go, sell everything you own, give to the poor—you'll have treasure in heaven—then come follow me." ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
22 At this word his face fell, and he went away grieving, for he had many possessions. ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
23 Jesus looked around and told his disciples, "How hard it will be for the wealthy to enter the kingdom of our Father!" ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
24 The disciples were amazed at his words. Jesus said to them again, "Children, how hard it is to enter the kingdom of our Father! ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
25 A camel goes through a needle's eye easier than a rich person enters our Father's kingdom." ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.
26 They were even more astonished and said to one another, "Then who can be saved?" ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
27 Jesus looked at them and said, "With man, impossible; but not with our Father, for all things are possible with our Father." ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
28 Peter began to say to him, "Look, we have left everything and followed you." ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
29 Jesus said, "Truly I tell you, no one has left house or brothers or sisters or mother or father or children or fields for my sake and for the gospel, ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
30 "who won't receive a hundredfold now, in this time—houses, brothers, sisters, mothers, children, fields, with persecutions—and in the age to come, eternal life. ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
31 But many who are first will be last, and the last first." ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
32 On the road up to Jerusalem, Jesus walked ahead of them. They were amazed, and those following were afraid. Taking the twelve aside again, he began telling them what was about to happen to him: ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
33 "Look, we're going up to Jerusalem. The Son of Man will be handed over to the chief priests and scribes, who will condemn him to death and hand him over to the Gentiles. ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
34 They will mock him, spit on him, flog him, and kill him; after three days he will rise." ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
35 James and John, Zebedee's sons, came to him and said, "Teacher, we want you to do for us whatever we ask." ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
36 He said to them, "What do you want me to do for you?" ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,
37 They said to him, "Let us sit in your glory, one at your right, one at your left." ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
38 Jesus said to them, "You don't know what you're asking. Can you drink the cup I drink, or be baptized with the baptism I'm baptized with?" ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
39 "We can," they said. Jesus said to them, "The cup I drink, you will drink; the baptism I'm baptized with, you will be baptized with, ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
40 but sitting at my right or left isn't mine to give - that's for those it's prepared for." ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
41 Hearing this, the ten grew indignant at James and John. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
42 Jesus called them together and said, "You know that those regarded as rulers of the Gentiles dominate them, and their great ones wield power over them. ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
43 But it isn't so among you. Instead, whoever wants to be great among you must be your servant, ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.
44 and whoever wants to be first among you must be slave of all. ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.
45 For even the Son of Man came not to be served, but to serve, and to give his life as a ransom for many." ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
46 They came to Jericho. As Jesus and his disciples were leaving with a large crowd, blind Bartimaeus son of Timaeus sat begging by the road. ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
47 Hearing it was Jesus of Nazareth, he began to cry out, "Jesus, Son of David, have mercy on me!" ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
48 Many scolded him to be silent, but he shouted even louder, "Son of David, have mercy on me!" ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
49 Jesus stopped and said, "Call him." So they called the blind man: "Courage! Get up—he's calling you." ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
50 Throwing off his cloak, he jumped up and came to Jesus. ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
51 Jesus told him, "What do you want me to do for you?" The blind man told him, "Rabboni, let me see again." ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
52 Jesus told him, "Go; your faith has healed you." At once he regained his sight and followed Jesus on the road. ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]