Skip to content
The Believer's Library

Indian Revised Version (IRV) Kannada - 2019

Mark 11 IRVKan

Show IRVKan only
Verse × ×
1 Nearing Jerusalem, at Bethphage and Bethany by the Mount of Olives, Jesus sent two of his disciples ahead, ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
2 telling them, "Go into the village ahead of you, and as soon as you enter it, you'll find a tied colt no one has ever ridden. Untie it and bring it here." “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
3 If anyone asks you, 'Why are you doing this?' say, 'The Lord needs it and will send it back here at once.' ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
4 They went and found a colt tied at a doorway outside in the street, and untied it. ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
5 Some of those standing there asked them, "What are you doing, untying that colt?" ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.
6 They answered as Jesus had told them, and the people let them go. ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
7 They brought the colt to Jesus and threw their cloaks over it, and he sat on it. ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
8 Many spread their cloaks on the road; others spread leafy branches cut from the fields. ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
9 Those who went ahead and those who followed were shouting, "Hosanna! Blessed is he who comes in the name of our Father! ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
10 Blessed is the coming kingdom of our father David! Hosanna in the highest!" ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
11 Jesus entered Jerusalem and the temple, looked around at everything, and—since it was already late—went out to Bethany with the Twelve. ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
12 The next day, as they were leaving Bethany, Jesus was hungry. ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
13 Seeing a leafy fig tree in the distance, he went to see if it had anything on it. Reaching it, he found nothing but leaves, since it wasn't fig season. ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
14 Then he told it, "May no one ever eat fruit from you again." His disciples heard him say it. ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.
15 They arrived in Jerusalem, and Jesus entered the temple and began driving out the sellers and buyers there. He overturned the money-changers' tables and the seats of those selling doves, ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
16 and he would not allow anyone to carry merchandise through the temple courts. ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
17 And he taught them, saying, "Isn't it written: 'My house will be called a house of prayer for all the nations'? But you've made it a den of robbers." ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
18 The chief priests and scribes heard this and sought a way to destroy him, for they feared him, since the whole crowd was amazed at his teaching. ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
19 And when evening came, they went out of the city. ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
20 In the morning, as they passed by, they saw the fig tree withered from its roots. ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
21 Peter remembered and said to him, "Rabbi, look! The fig tree you cursed has withered." ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
22 Jesus answered them, "Have faith in our Father. ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
23 Truly I tell you, whoever tells this mountain, 'Be lifted up and thrown into the sea,' without doubting in his heart but believing what he says will happen—it will be done for him. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
24 So I tell you: whatever you pray and ask for, believe you've received it - it will be yours. ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
25 When you stand praying, forgive whatever you hold against anyone, so your Father in heaven may also forgive you your sins." ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
26 Not in this edition ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
27 They returned to Jerusalem. While Jesus walked in the temple, the chief priests, scribes, and elders came to him, ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
28 and asked, "By what authority are you doing this? Or who gave you this authority to do it?" “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
29 Jesus said to them, "I'll ask you one question. Answer me, and I'll tell you by what authority I do these things. ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
30 John's baptism—was it from heaven, or of human origin? Answer me." ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
31 They discussed it among themselves: "If we say, 'From heaven,' he'll ask, 'Then why didn't you believe him?' ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
32 But if we say, 'From humans'"—they feared the crowd, since all considered John a true prophet. ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
33 They answered Jesus, "We don't know." Jesus said, "Neither will I tell you by what authority I do these things." ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]