Skip to content
The Believer's Library

Indian Revised Version (IRV) Kannada - 2019

Mark 12 IRVKan

Show IRVKan only
Verse × ×
1 He began speaking to them in parables: "A man planted a vineyard, fenced it in, dug a winepress pit, built a watchtower, rented it to farmers, and left. ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
2 At harvest time he sent a servant to the tenants to collect some of the vineyard's fruit. ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
3 But they seized him, beat him, and sent him away empty-handed. ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 Again he sent them another servant; they hit him on the head and dishonored him. ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
5 And he sent another, and they killed him—then many more, beating some and killing others." ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
6 He had still one, a beloved son; last he sent him to them, saying, "They will respect my son." ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
7 "But the tenants said to each other, 'This is the heir. Come, let's kill him—the inheritance will be ours.' ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
8 So they took him and killed him and threw him out of the vineyard. ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
9 So what will the vineyard's owner do? He'll come, destroy the tenants, and give the vineyard to others. ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
10 Have you not read this Scripture: 'The stone the builders rejected has become the cornerstone; “‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 this was our Father's doing, and it is marvelous in our eyes'?" ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
12 They wanted to arrest him but feared the crowd, knowing he'd told the parable against them. So they left him and went away. ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
13 They sent some of the Pharisees and Herodians to trap him in his words. ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
14 They came and said to him, "Teacher, we know you're true and don't care what anyone thinks, since you don't judge by appearance but truly teach our Father's way. Is it lawful to pay taxes to Caesar, or not? Should we pay, or should we not?" ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
15 But, knowing their hypocrisy, he said to them, "Why are you testing me? Bring me a silver coin to look at." ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
16 They brought one, and he asked them, "Whose image and inscription is this?" They told him, "Caesar's." ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
17 Jesus told them, "Give to Caesar what's Caesar's, and to our Father what's our Father's." They were amazed at him. ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
18 And the Sadducees came to him, who say there is no resurrection. And they questioned him, saying, ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
19 "Teacher, Moses wrote for us that if a man's brother dies leaving a wife but no child, the brother must marry her and raise up offspring for him. ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
20 There were seven brothers; the first married, and when he died, left no children. “ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
21 And the second married her, and he died leaving no children. And the third likewise. ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
22 And none of the seven left any children. Last of all the woman also died. ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
23 At the resurrection, when they rise, whose wife will she be? The seven had her as wife." ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
24 Jesus said to them, "Isn't this why you're wrong—you know neither the Scriptures nor our Father's power? ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
25 For when the dead rise, they neither marry nor are given in marriage, but are like the angels in heaven. ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 About the dead being raised, haven't you read in Moses' book, in the passage about the bush, how our Father told him, 'I am the God of Abraham, of Isaac, and of Jacob'? ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
27 He is not God of the dead, but of the living. You are badly mistaken." ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
28 One scribe approached, heard them debate, saw Jesus answered well, and asked, "Which commandment is most important of all?" ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
29 Jesus answered, "The most important is this: 'Hear, Israel: our Father is one.' ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು.
30 Love your Father with all your heart, with all your soul, with all your mind, with all your strength." ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
31 "The second is this: 'Love your neighbor as yourself.' No commandment is greater than these." ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
32 The scribe said to him, "Well said, Teacher. You've said truly that he is one, and there's no other besides him. ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
33 Loving him with all the heart, all the understanding, all the strength, and loving one's neighbor as oneself, matters far more than all whole burnt offerings and sacrifices." ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
34 Seeing he answered wisely, Jesus said to him, "You are not far from the kingdom of our Father." After that, no one dared ask him any more questions. ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 Teaching in the temple, Jesus asked, "How can the scribes say the Christ is the son of David? ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
36 David himself said by the Holy Spirit: 'Our Father said to my Lord, "Sit at my right hand until I put your enemies under your feet."' “‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
37 "David himself calls the Christ Lord. How can the Christ be David's son?" The large crowd enjoyed listening to him. ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
38 And in his teaching he said, "Beware of the scribes, who like walking in long robes and being greeted in the marketplaces, ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
39 and to have the best seats in the synagogues and the places of honor at banquets, ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
40 who devour widows' houses and make long prayers just for show. These will receive the greater condemnation." ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
41 Sitting across from the treasury, he watched the crowd drop coins in; many rich people dropped in large sums. ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
42 And a poor widow came and put in two small copper coins, worth a penny. ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
43 Calling his disciples, he said, "Truly, I tell you, this poor widow put in more than all who put into the offering box. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
44 For they all gave from their surplus, but she gave from her poverty—all she had, her whole livelihood." ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]