Skip to content
The Believer's Library

Indian Revised Version (IRV) Kannada - 2019

Mark 13 IRVKan

Show IRVKan only
Verse × ×
1 Leaving the temple, one of his disciples said to him, "Teacher, look! What huge stones, what magnificent buildings!" ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
2 Jesus said to him, "Do you see these great buildings? Not one stone will remain here on another; all will be torn down." ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
3 As he sat on the Mount of Olives facing the temple, Peter, James, John, and Andrew asked him privately, ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
4 tell us, when will these things happen, and what sign shows all this is about to be fulfilled? ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
5 Jesus began to tell them: "Watch out that no one deceives you. ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
6 Many will come in my name, claiming, 'I am he,' and they will deceive many. ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
7 When you hear of wars and rumors of wars, don't be troubled—these must happen, but the end isn't yet. ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
8 Nation will rise against nation, kingdom against kingdom, earthquakes in various places, famines—these are the beginning of birth pains. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
9 Watch yourselves. They'll hand you to councils and beat you in synagogues. Because of me you'll stand before governors and kings, as a testimony to them. “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
10 And the gospel must first be proclaimed to all nations. ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
11 When they arrest and hand you over, don't worry beforehand what to say. Say whatever you're given in that hour—it's not you speaking, but the Holy Spirit. “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
12 Brother will betray brother to death, father his child. Children will rise against parents and have them put to death. ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
13 All will hate you for my name, but whoever endures to the end will be saved. ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
14 When you see the abomination of desolation standing where it should not be (reader, take note), those in Judea must flee to the mountains. “ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15 Let no one on the housetop go down or enter the house to take anything out. ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
16 Let no one in the field go back to get their coat. ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
17 How dreadful it will be in those days for pregnant women and nursing mothers! “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
18 Pray that it will not happen in winter, ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
19 for those days will bring suffering unmatched since our Father created the world until now—and never to be matched again. ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
20 Had the Sovereign not shortened those days, no one would survive; but the Sovereign shortened them for the elect he chose. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
21 Then if anyone tells you, 'Look, here is the Christ!' or 'Look, there!' don't believe it. “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
22 False christs and false prophets will appear, performing signs and wonders to deceive the elect, if possible. ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
23 So be on your guard; I have told you everything ahead of time. ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
24 But in those days, after that suffering, the sun will darken, and the moon will not give its light; ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
25 the stars will fall from the sky, and the powers in the heavens will be shaken. ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
26 Then they will see the Son of Man coming in clouds with great power and glory. ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
27 He will send his angels and gather his chosen from the four winds, from earth's ends to heaven's ends. ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
28 Learn this from the fig tree: once its branch softens and leaves sprout, you know summer is near. “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
29 So also, when you see these things happening, know it's near, at the door. ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
30 Truly I tell you, this generation will certainly not pass away until all these things have happened. ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
31 Heaven and earth will pass away, but my words will never pass away. ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
32 But no one knows that day or hour—not the angels in heaven, not the Son, only the Father. “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
33 Be on guard! Stay alert! For you do not know when that time will come. ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.
34 Like a man on a journey: he leaves his house, gives his servants authority—each his own task—and orders the doorkeeper to stay alert. ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
35 So stay alert, since you don't know when the master of the house comes—evening, midnight, rooster's crow, or dawn. “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
36 Otherwise, if he comes suddenly, he may find you sleeping. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
37 What I say to you, I say to everyone: Keep watch!" ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]